Recent Posts

Sunday, January 19, 2025
ಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೈರೋಳ್ತಡ್ಕ ಒಕ್ಕೂಟ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಣಿಯೂರು ವಲಯದ ವತಿಯಿಂದ ದೇವಸ್ಥಾನದ ಸ್ವಚ್ಛತಾ ಕಾರ್ಯಕ್ರಮ- ಕಹಳೆ ನ್ಯೂಸ್

ಗುರುವಾಯನಕೆರೆ : ಕಣಿಯೂರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೈರೋಳ್ತಡ್ಕ ಒಕ್ಕೂಟ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಣಿಯೂರು ವಲಯದ ವತಿಯಿಂದ ಧಾರ್ಮಿಕ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಕುರಾಯ ಶ್ರೀ ಸದಾಶೀವೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು. ದೇವಸ್ಥಾನದ ಸುತ್ತಲೂ ಇದ್ದ ಕಸಕಡ್ಡಿ ಗಳನ್ನು ಹೆಕ್ಕಿ, ಕಳೆ ಗಿಡಗಳನ್ನು ತೆಗೆದು ಆವರಣವನ್ನು ಸ್ವಚ್ಚ ಗೊಳಿಸಲಾಯಿತು. ಈ ಸ್ವಚ್ಛತಾ ಕಾರ್ಯದಲ್ಲಿ ಮೈರೋಳ್ತಡ್ಕ ಒಕ್ಕೂಟದ ಅಧ್ಯಕ್ಷರಾದ ಕೃಷ್ಣಯ್ಯ ಆಚಾರ್ಯ, ವಲಯ ಮೇಲ್ವಿಚಾರಕರಾದ ಶ್ರೀಮತಿ ಪ್ರೇಮಾ, ಭಜನಾ ಮಂಡಳಿ ಅಧ್ಯಕ್ಷರಾದ ಧನಂಜಯ, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಾದ ದಿನೇಶ್ ಖಂಡಿಗ, ವಿನಯಚಂದ್ರ ಮೊಗ್ರು, ಸಂಯೋಜಕಿ ಹಾಗೂ ಸೇವಾಪ್ರತಿನಿಧಿ ಶ್ರೀಮತಿ ಚಂದ್ರಕಲಾ ಮೊಗ್ರು, ಒಕ್ಕೂಟದ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದರು. ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಕಾರ್ಯದರ್ಶಿ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ಮೋಹನ್ ಬಂಗೇರರವರು ಒಕ್ಕೂಟದ ಸ್ವಚ್ಛತಾ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

 

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು