BIG BREAKING:ರಾಜ್ಯಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನೈಟ್ ಕಫ್ರ್ಯೂ ಹಾಗೂ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕಫ್ರ್ಯೂ ಜಾರಿ- ಕಹಳೆ ನ್ಯೂಸ್
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕಫ್ರ್ಯೂ ಜಾರಿ ಮಾಡಲಾಗುತ್ತಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಅಧಿಕಾರಿಗಳ ಜೊತೆ ಸಭೆ ಬಳಿಕ ಮಾತನಾಡಿದ ಸಿಎಂ, ರಾಜ್ಯಾದ್ಯಂತ ರಾತ್ರಿ 9ಗಂಟೆಯಿಂದ ಬೆಳಿಗ್ಗೆ 5 ಗಂಟೆವರೆಗೆ ನೈಟ್ ಕಫ್ರ್ಯೂ ಜಾರಿಗೊಳಿಸಲಾಗಿದ್ದು, ಕೇರಳ, ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕಫ್ರ್ಯೂ ಜಾರಿಯಾಗಲಿದೆ. ಬಳಿಕ ಪರಿಸ್ಥಿತಿ ಅವಲೋಕಿಸಿ ಕೋವಿಡ್ ನಿಯಂತ್ರಣಕ್ಕೆ ಇನ್ನಷ್ಟು ಕಠಿಣ ಕ್ರಮಗಳ ಬಗ್ಗೆ ಈ ತಿಂಗಳಾಂತ್ಯಕ್ಕೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.