Recent Posts

Sunday, January 19, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಸಾಮಾಜಿಕ ಜಾಲತಾಣದಲ್ಲಿ ಹಿಂದೂ ದೇವರಿಗೆ ಅವಹೇಳನ – ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವವರ ವಿರುದ್ಧ ಸೂಕ್ತ ಕ್ರಮಕ್ಕೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ಪ್ರಖಂಡ ಹಾಗೂ ಕೆಯ್ಯೂರು ಘಟಕದ ವತಿಯಿಂದ ಮನವಿ – ಕಹಳೆ ನ್ಯೂಸ್

ಹಿಂದೂಗಳ ಆರಾಧನೆಯ ದೈವ ದೇವರುಗಳ ಬಗ್ಗೆ ಅಶ್ಲೀಲವಾಗಿ ಚಿತ್ರಿಸಿ ಕಳೆದ ೩ ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಅದನ್ನು ರವಾನಿಸಿ ವಿಕೃತಿ ಮೆರೆಯುತ್ತಿರುವುದು ನಡೆಯುತ್ತಿದೆ.


ಇದರಿಂದಾಗಿ ಬಹುಸಂಖ್ಯಾತ ಹಿಂದೂಗಳ ಮನಸ್ಸಿಗೆ ಘಾಸಿ ಉಂಟಾಗಿದೆ. ಇಂತಹ ಸಂದೇಶಗಳು ಜಿಲ್ಲೆಯಲ್ಲಿ ಕೋಮು ಸೌಹಾರ್ದತೆಗೆ ದಕ್ಕೆ ತರುವಂತದ್ದಾಗಿದ್ದು ಈ ಕೃತ್ಯ ಎಸಗಿರುವ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗಿ ಹಾಗೂ ಇನ್ನು ಮುಂದಕ್ಕೆ, ಇಂತಹ ಅಶ್ಲೀಲ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಮರುಕಳಿಸದಂತೆ ಸಂದೇಶ ರವಾನಿಸಿದವರ ವಿರುದ್ದ ಕಠಿಣ ಕ್ರಮಕ್ಕೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ಪ್ರಖಂಡ ಹಾಗೂ ಕೆಯ್ಯೂರು ಘಟಕದ ವತಿಯಿಂದ ಸಂಪ್ಯ ಗ್ರಾಮಾಂತರ ಪೋಲಿಸ್ ಠಾಣೆಗೆ ಮನವಿ ಸಲ್ಲಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು


ಈ ಸಂದರ್ಭದಲ್ಲಿ ಬಜರಂಗದಳ ಪುತ್ತೂರು ಪ್ರಖಂಡ ಸಂಚಾಲಕ್ ಹರೀಶ್ ಕುಮಾರ್ ದೊಳ್ಪಾಡಿ,ವಿಶ್ವ ಹಿಂದೂ ಪರಿಷತ್ ಕೆಯ್ಯೂರು ಘಟಕದ ಅಧ್ಯಕ್ಷರಾದ ಚರಣ್ ಕೆಯ್ಯೂರು , ಬಜರಂಗದಳ ಸಂಚಾಲಕ್ ಅಜಿತ್ ಕೆಯ್ಯೂರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು

ಜಾಹೀರಾತು
ಜಾಹೀರಾತು
ಜಾಹೀರಾತು