Recent Posts

Sunday, January 19, 2025
ಸುದ್ದಿ

ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಘೋಷಣೆ : ಶೇ.99.9ರಷ್ಟು ವಿದ್ಯಾರ್ಥಿಗಳು ಪಾಸ್ – ಫಲಿತಾಂಶ ಘೋಷಿಸಿದ ಶಿಕ್ಷಣ ಸಚಿವ ಬಿಸಿ ನಾಗೇಶ್- ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿನ ನಡುವೆಯೂ ನಡೆದಂತಹ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪ್ರಕಟಿಸಿದ್ದು, ಈ ಮೂಲಕ ರಾಜ್ಯದ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಘೋಷಣೆಯಾಗಿದೆ. ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ಸಿ.ನಾಗೇಶ್ ಅವರು, ಕೊರೋನಾ ಸೋಂಕಿನ ಸಂದರ್ಭದಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನ 8,76,581 ಲಕ್ಷ ವಿದ್ಯಾರ್ಥಿಗಳು ಬರೆದಿದ್ದರು. ಈ ಬಾರಿ ಶೇ.99.9ರಷ್ಟು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಪಾಸ್ ಆಗಿದ್ದಾರೆ. ಒಂದು ಮಗು ಮಾತ್ರ ತಾನು ಬರೆಯದೇ ಮತ್ತೊಬ್ಬರನ್ನು ಕಳಿಸಿದ್ದರಿಂದಾಗಿ ಶೇ.100ರಷ್ಟು ಫಲಿತಾಂಶ ಪ್ರಕಟಗೊಂಡಿಲ್ಲ ಎಂದು ತಿಳಿಸಿದರು. ಈ ವರ್ಷ ಎ+ ಗ್ರೇಡ್ ಅನ್ನು 1,28,931 ವಿದ್ಯಾರ್ಥಿಗಳು ತೆಗೆದುಕೊಂಡಿದ್ದಾರೆ. ಎ ಗ್ರೇಡ್ ಅನ್ನು 2,50,317 ವಿದ್ಯಾರ್ಥಿಗಳು ಪಡೆದಿದ್ದಾರೆ. ಬಿ ಗ್ರೇಡ್ ಅನ್ನು 2,87,684 ವಿದ್ಯಾರ್ಥಿಗಳು ಪಡೆದಿದ್ದಾರೆ. ಸಿ ಗ್ರೇಡ್ ಅನ್ನು 1,13,610 ವಿದ್ಯಾರ್ಥಿಗಳು ಪಡೆದಿದ್ದಾರೆ. ಈ ಬಾರಿ 8,76,581 ವಿದ್ಯಾರ್ಥಿಗಳಲ್ಲಿ 4,72,643 ವಿದ್ಯಾರ್ಥಿಗಳು ಹಾಗೂ 4,01,282 ವಿದ್ಯಾರ್ಥಿನಿಯರು ಪಾಸ್ ಆಗಿರೋದಾಗಿ ತಿಳಿಸಿದರು. ಬಳಿಕ ವಿದ್ಯಾರ್ಥಿಗಳು ತಮ್ಮ ನೊಂದಣಿ ಸಂಖ್ಯೆಯನ್ನು ದಾಖಲಿಸೋ ಮೂಲಕ ssಟಛಿ.ಞಚಿಡಿಟಿಚಿಣಚಿಞಚಿ.gov.iಟಿ ಜಾಲತಾಣಕ್ಕೆ ಭೇಟಿ ನೀಡಿ ಫಲಿತಾಂಶ ವೀಕ್ಷಿಸಬಹುದು ಎಂದು ತಿಳಿಸಿದರು.

ಜಾಹೀರಾತು

ಜಾಹೀರಾತು
ಜಾಹೀರಾತು