Recent Posts

Sunday, January 19, 2025
ಬೆಂಗಳೂರುರಾಜಕೀಯರಾಜ್ಯಸುದ್ದಿ

” ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧ ದಾಖಲಾಗಿರುವ ಸುಳ್ಳು ಪ್ರಕರಣ ರದ್ದುಗೊಳಿಸಿ ” ಗೃಹ ಸಚಿವರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮನವಿ – ಕಹಳೆ ನ್ಯೂಸ್

ಬೆಂಗಳೂರು, ಆ. 09: ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಭಾರತೀಯ ಜನತಾ ಪಾರ್ಟಿ ಮತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ವಾಪಾಸ್ ಪಡೆಯಬೇಕೆಂದು ಸಂಘಟನೆಗಳು ಕೊಟ್ಟಿರುವ ಮನವಿಯನ್ನು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಗೃಹ ಸಚಿವ ಆರಗ ಜ್ನಾನೇಂದ್ರ ಅವರಿಗೆ ಹಸ್ತಾಂತರಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು

ಅನ್ಯ ಸಂಘಟನೆಯ ಕಾರ್ಯಕರ್ತರ ಪ್ರಕರಣಗಳನ್ನು ಹಿಂದಿನ ಸರ್ಕಾರ ವಾಪಾಸ್ ಪಡೆದಿದ್ದು ಅದೇ ಸಂದರ್ಭದಲ್ಲಿ ಬಿಜೆಪಿ ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರ ಕೇಸುಗಳು ಬಾಕಿ ಉಳಿದಿದೆ ಎಂದು ಕರಾವಳಿ ಭಾಗದ ಹಿಂದೂ ಸಂಘಟನೆಗಳು ಕೊಟ್ಟಿದ್ದ ಮನವಿಯನ್ನು ಉಲ್ಲೇಖಿಸಲಾಗಿದೆ. ರಾಜ್ಯದಲ್ಲಿರುವ ಇಂತಹಾ ಪ್ರಕರಣಗಳನ್ನು ಕೂಡಲೇ ಮಾಹಿತಿ ಪಡೆದುಕೊಂಡು ಭಾರತೀಯ ಜನತಾ ಪಾರ್ಟಿ ಹಾಗೂ ಹಿಂದೂ ಕಾರ್ಯಕರ್ತರ ಮೇಲಿರುವ ಸುಳ್ಳು ಪ್ರಕರಣಗಳನ್ನು ತಕ್ಷಣ ವಾಪಾಸು ಪಡೆಯಬೇಕೆಂದು ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಉಲ್ಲೇಖಿಸಿದರು.

ಗೃಹ ಸಚಿವ ಆರಗ ಜ್ನಾನೇಂದ್ರರವರು ಈ ವಿಷಯಗಳನ್ನು ಕೂಡಲೇ ಗಮನಿಸಿ ಎಲ್ಲಾ ಜಿಲ್ಲೆಗಳಿಂದ ಮಾಹಿತಿಯನ್ನು ಪಡೆದು ಸಚಿವ ಸಂಪುಟದಲ್ಲಿ ಮಂಡಿಸಿ ಸುಳ್ಳು ಕೇಸುಗಳನ್ನು ವಾಪಾಸು ಪಡೆಯುವ ಭರವಸೆ ನೀಡಿದರು.