Recent Posts

Monday, January 20, 2025
ಪುತ್ತೂರು

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಬಿ.ಎಸ್ ಭಾರ್ಗವಿ ರವರಿಗೆ ಅಭಿನಂದನೆ- ಕಹಳೆ ನ್ಯೂಸ್

ಪುತ್ತೂರು; 2020-21 ಸಾಲಿನ ಎಸ್.ಎಸ್.ಎಲ್. ಸಿ ಪರೀಕ್ಷೆಯಲ್ಲಿ 621 ಅಂಕಗಳನ್ನು ಗಳಿಸಿ ವಿಟ್ಲ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿ ಬಿ.ಎಸ್ ಭಾರ್ಗವಿ ಅವರನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಅಭಿನಂದಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಮಹೇಶ ನಿಟಿಲಾಪುರ ವಿದ್ಯಾರ್ಥಿನಿ ಬಿ.ಎಸ್ ಭಾರ್ಗವಿ ಅವರಿಗೆ ಶಾಲು ಹೊದಿಸಿ ಅಭಿನಂದಿಸಿದರು. ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿದ ಬಿ.ಎಸ್  ಭಾರ್ಗವಿ ,ತಮ್ಮ ಪಿಯುಸಿ ಶಿಕ್ಷಣವನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಮುಂದುವರಿಸಿ ವಿಜ್ಞಾನ ಕ್ಷೇತ್ರದಲ್ಲಿ ಪಿಸಿಯಂಬಿ ಯನ್ನು ಆಯ್ಕೆಮಾಡಿ ,ವೈದ್ಯಕೀಯ ವಿದ್ಯಾಭ್ಯಾಸ ಪಡೆದು ವೈದ್ಯಳಾಗುವ ಗುರಿಯನ್ನು ಹೊಂದಿದ್ದೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕರಾದ ದೇವಿಚರಣ್,ಶ್ರೀಧರ್ ಶೆಟ್ಟಿಗಾರ್, ಆದಿತ್ಯಶರ್ಮಾ,ಚೈತ್ರಾ, ಜ್ಯೋತಿ ಕುಮಾರಿ, ಪುಪ್ಪಲತಾ ಉಪಸ್ಥಿತರಿದ್ದರು.

ಜಾಹೀರಾತು

ಜಾಹೀರಾತು
ಜಾಹೀರಾತು