Sunday, November 17, 2024
ಪುತ್ತೂರು

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಕರ ಪತ್ರ ಬಿಡುಗಡೆ ಕಾರ್ಯಕ್ರಮ-ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ಜಿಲ್ಲಾ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ, ಜನ್ಮ ಫೌಂಡೇಶನ್ ಟ್ರಸ್ಟ್ ಸಹಯೋಗದೊಂದಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ವಿಶ್ವ ಹಿಂದು ಪರಿಷತ್ ಸ್ಥಾಪನಾ ದಿನದ ಅಂಗವಾಗಿ 2 ವರ್ಷದಿಂದ 7 ವರ್ಷದ ಮಕ್ಕಳಿಗೆ ಶ್ರೀ ಕೃಷ್ಣ ಸ್ಪರ್ಧೆ ಏರ್ಪಡಿಸಲಾಗಿದ್ದು, ಇದರ ಪೂರ್ವಭಾವಿಯಾಗಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿ ಕರ ಪತ್ರ ಬಿಡುಗಡೆಗೊಳಿಸಲಾಯಿತು. ಕೋವಿಡ್ ಸೋಂಕು ನಿಯಂತ್ರಣದ ಸಲುವಾಗಿ ಸರಕಾರದ ಮಾರ್ಗಸೂಚಿಯನ್ನು ಪಾಲಿಸಿಕೊಂಡು ಶ್ರೀಕೃಷ್ಣ ವೇಷ ಸ್ಪರ್ಧೆ ನಡೆಯಲಿದ್ದು, ದೇವಳದಲ್ಲಿ ಕಾರ್ಯಕ್ರಮದ ಯಶಸ್ವಿಗೆ ಪ್ರಧಾನ ಅರ್ಚಕ ವಿ.ಎಸ್ ಭಟ್ ಅವರು ಪ್ರಾರ್ಥಿಸಿದರು. ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ಶೇಖರ್ ನಾರಾವಿ, ರಾಮಚಂದ್ರ ಕಾಮತ್ ಕರ ಪತ್ರ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ, ಪ್ರಧಾನ ಕಾರ್ಯದರ್ಶಿ ಸತೀಶ್, ಜನ್ಮ ಫೌಂಡೇಶನ್ ಟ್ರಸ್ಟ್‍ನ ಅಧ್ಯಕ್ಷ ಡಾ.ಹರ್ಷಕುಮಾರ್ ರೈ ಮಾಡಾವು, ಬಜರಂಗದಳ ಸಂಚಾಲಕ ಶ್ರೀಧರ್ ತೆಂಕಿಲ ಉಪಸ್ಥಿತರಿದ್ದರು.

 

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು


ಶ್ರೀಕೃಷ್ಣ ವೇಷದ ಭಾವ ಚಿತ್ರವನ್ನು ವಾಟ್ಸಪ್ ನಂಬರ್ ಗೆ ಕಳುಹಿಸಿ:
ಸ್ಪರ್ಧೆಯಲ್ಲಿ ಭಾಗವಹಿಸುವವರು ಶ್ರೀ ಕೃಷ್ಣ ವೇಷ ಧರಿಸಿ ತಮ್ಮ ಭಾವ ಚಿತ್ರವನ್ನು ವಿಳಾಸದೊಂದಿಗೆ ಮೊಬೈಲ್ ಸಂಖ್ಯೆ: 72044002108 ಗೆ ಆ.25ರ ಒಳಗಾಗಿ ಕಳುಹಿಸಿ ಕೊಡಬೇಕು. ಜಿಲ್ಲಾ ಮಟ್ಟದ ಸ್ಪರ್ಧೆಯಾಗಿದ್ದು 2 ರಿಂದ 7 ವರ್ಷದ ಮಕ್ಕಳಿಗೆ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿದೆ. ಎಡಿಟ್ ಮಾಡಿದ ಭಾವ ಚಿತ್ರವನ್ನು ಸ್ಪರ್ಧೆಗೆ ಪರಿಗಣಿಸುವುದಿಲ್ಲ ಎಂದು ಸಂಘಟಕರು ತಿಳಿಸಿದ್ದಾರೆ