Recent Posts

Monday, January 20, 2025
ಪುತ್ತೂರು

ದೆಹಲಿಯ ಸಂಸತ್ ಭವನದಲ್ಲಿ ಕೇಂದ್ರ ರೈಲ್ವೆ ಖಾತೆ ಸಚಿವರಾದ ಅಶ್ವಿನಿ ವೈಷ್ಣವ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಸಂಸದರು ನಳಿನ್ ಕುಮಾರ್ ಕಟೀಲ್ ಮತ್ತು ಪುತ್ತೂರು ಶಾಸಕರಾದ ಸಂಜೀವ ಮಠಂದೂರು ಭೇಟಿ | ಪುತ್ತೂರಿನ ಅಭಿವೃದ್ಧಿ ಕುರಿತು ಮನವಿ – ಕಹಳೆ ನ್ಯೂಸ್

ಪುತ್ತೂರು ನಗರಕ್ಕೆ ಅತ್ಯವಶ್ಯಕ ಯೋಜನೆಯಾದ ಎ.ಪಿ.ಎಂ.ಸಿ ಯನ್ನು ಸಂಪರ್ಕಿಸುವ ರಸ್ತೆಗೆ ರೈಲ್ವೆ ಕೆಳಸೇತುವೆಯನ್ನು ನಿರ್ಮಾಣ ಮಾಡುವ ಬಗ್ಗೆ ಇಂದು ದೆಹಲಿಯ ಸಂಸತ್ ಭವನದಲ್ಲಿ ಕೇಂದ್ರ ರೈಲ್ವೆ ಖಾತೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಸಂಸದರು ಶ್ರೀ ನಳಿನ್ ಕುಮಾರ್ ಕಟೀಲ್ ಮತ್ತು ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು’ರವರು ಭೇಟಿಯಾಗಿ ಮಾತುಕತೆ ನಡೆಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ರಾಜ್ಯ ಸರ್ಕಾರವು ತನ್ನ ಪಾಲಿನ ಶೇಕಡ 50% ಅನುದಾನವನ್ನು ಮೂಲಭೂತ ಸೌಕರ್ಯ ಇಲಾಖೆ ಮೂಲಕ ಕಾದಿರಿಸಿದ್ದು ಅನುದಾನವನ್ನು ಕೇಂದ್ರ ಸರ್ಕಾರದಿಂದ ತಕ್ಷಣ ಬಿಡುಗಡೆ ಮಾಡುವಂತೆ ಕೋರಿದರು. ಇವರ ಜೊತೆಗೆ ಪುತ್ತೂರು ಎಪಿಎಂಸಿ ಅಧ್ಯಕ್ಷರಾದ ಶ್ರೀ ದಿನೇಶ್ ಮೆದು ಹಾಗೂ ನಿರ್ದೇಶಕರಾದ ಶ್ರೀ ಬಾಲಕೃಷ್ಣ ಬಾಣಜಾಲು ಅವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು