Recent Posts

Monday, January 20, 2025
ಸುದ್ದಿ

ಹಿಂದು ಜಾಗರಣ ವೇದಿಕೆ ಕಡೇಶಿವಾಲಯ ವತಿಯಿಂದ ಅಮೈ ಮಾಡತ್ತಾರು ದೈವಸ್ಥಾನದ ಆವರಣದಲ್ಲಿ ಭಾರತ್ ಮಾತಾ ಪೂಜನಾ ಕಾರ್ಯಕ್ರಮ – ಕಹಳೆ ನ್ಯೂಸ್

ಉಪ್ಪಿನಂಗಡಿ: ಹಿಂದು ಜಾಗರಣ ವೇದಿಕೆ ಕಡೇಶಿವಾಲಯ ವತಿಯಿಂದ ಅಮೈ ಮಾಡತ್ತಾರು ದೈವಸ್ಥಾನದ ಆವರಣದಲ್ಲಿ ಭಾರತ್ ಮಾತಾ ಪೂಜನಾ ಕಾರ್ಯಕ್ರಮವು ನೆರವೇರಿತು. ಕಡೇಶಿವಾಲಯ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕರಾದ ನಾರಾಯಣ್ ನಾಯ್ಕ್ ಸೂರಂಗೊಲು ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ , ವಿಟ್ಲ ತಾಲೂಕು ಹಿಂದೂ ಜಾಗರಣ ವೇದಿಕೆ ಅಧ್ಯಕ್ಷರಾದ ಗಣೇಶ್ ಕುಲಾಲ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ರು, ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಉಪನ್ಯಾಸಕರಾದ ಸಚಿನ್ ಜೈನ್ ಹಳೆಯೂರು ಬೌದ್ದಿಕ್ ನೇರವೇರಿಸಿದ್ರು, ಹಾಗೂ ಕಾರ್ಯಕ್ರಮವನ್ನು ಘಟಕದ ಪ್ರಧಾನ ಕಾರ್ಯದರ್ಶಿ ತಿಲಕ್ ಮುಂಡಾಲ ಸ್ವಾಗತಿಸಿದರು. ದುರ್ಗಾಪ್ರಸಾದ್ ಅಮೈ ವಂದಿಸಿ, ಶ್ರುತಿನ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಊರ ಹಾಗೂ ಸಂಘಟನೆಗಳ ಪ್ರಮುಖರು ಮತ್ತು ಕಾರ್ಯಕರ್ತರು ಭಾರತ್ ಮಾತಾ ಪೂಜಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು