Tuesday, November 19, 2024
ಸುದ್ದಿ

44ನೇ ವಯಸ್ಸಿನಲ್ಲಿ ಎಸ್.ಎಸ್.ಎಲ್.ಸಿ ಪಾಸಾಗಿ ಅಪೂರ್ವ ಸಾಧನೆ ಮಾಡಿದ ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಗುಮಾಸ್ತರಾಗಿರುವ ಜಯಶ್ರೀ ರಿಗೆ ಸನ್ಮಾನ-ಕಹಳೆ ನ್ಯೂಸ್

ಮಂಗಳೂರು: ಸಾಧನೆಗೆ ವಯಸ್ಸಿನ ಹಂಗಿಲ್ಲ ಎಂಬಂತೆ ತಮ್ಮ 44ನೇ ವಯಸ್ಸಿನಲ್ಲಿ ಎಸ್.ಎಸ್.ಎಲ್.ಸಿ ಪಾಸಾಗಿ ಅಪೂರ್ವ ಸಾಧನೆ ಮಾಡಿರುವ ಮಂಗಳೂರು ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಗುಮಾಸ್ತರಾಗಿರುವ ಜಯಶ್ರೀ ಅವರನ್ನು ಜಿಲ್ಲೆಯ ಸಹಕಾರಿ ರಂಗದ ಧುರೀಣರು ಭೇಟಿ ಮಾಡಿ ಆತ್ಮೀಯವಾಗಿ ಸನ್ಮಾನಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ವಿಶ್ವಕರ್ಮ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಮತ್ತು ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಕೇಂದ್ರಗಳ ಅಧ್ಯಕ್ಷ ಹರೀಶ್ ಆಚಾರ್, ಕರಾವಳಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಎ.ಎಸ್.ವೆಂಕಟೇಶ್, ಒಡಿಯೂರು ವಿವಿದೋದ್ಧೇಶ ಸಹಕಾರಿ ನಿಯಮಿತದ ಅಧ್ಯಕ್ಷ ಲಯನ್ ಎ.ಸುರೇಶ್, ಆತ್ಮಶಕ್ತಿ ವಿವಿದೋದ್ಧೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ ಅವರು ಜಯಶ್ರೀ ಅವರಿಗೆ ಶಾಲು ಹೊದಿಸಿ, ಫಲಪುಷ್ಪ, ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಹರೀಶ್ ಆಚಾರ್, “ತಮ್ಮ 44 ನೇ ವಯಸ್ಸಿನಲ್ಲಿ ಈ ಸಾಧನೆ ಮಾಡಿರುವ ಜಯಶ್ರೀಯವರು ಇತರರಿಗೆ ಮಾದರಿ. ಅವರ ಸಾಧನೆ ಹೆಚ್ಚಿನ ಜನರಿಗೆ ತಲುಪಿ ಅವರಿಗೂ ಪ್ರೇರಣೆಯಾಗಬೇಕು,” ಎಂದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ, ಮಂಗಳೂರು ವಿಶ್ವವಿದ್ಯಾನಿಲಯದ ರೆಡ್‍ಕ್ರಾಸ್ ನೋಡಲ್ ಅಧಿಕಾರಿ ಡಾ. ಗಣಪತಿ ಗೌಡ ಅವರೂ ಉಪಸ್ಥಿತರಿದ್ದರು. ಐದನೇ ತರಗತಿ ಓದಿದ್ದ ಮಂಗಳೂರಿನ ವೆಲೆನ್ಶಿಯಾ ನಿವಾಸಿಯಾಗಿರುವ ಜಯಶ್ರೀ, ಖಾಸಗಿ ಟ್ಯೂಷನ್ ಪಡೆದು ಈ ಬಾರಿ ಎಸ್.ಎಸ್.ಎಲ್.ಸಿ ಪಾಸಾಗಿದ್ದಾರೆ.