Recent Posts

Monday, January 20, 2025
ದಕ್ಷಿಣ ಕನ್ನಡ

ದ.ಕ. ಜಿಲ್ಲೆಯಲ್ಲಿ ಈ ವಾರಾಂತ್ಯವು ಕರ್ಫ್ಯೂ ಜಾರಿ- ಕಹಳೆ ನ್ಯೂಸ್

ಮಂಗಳೂರು: ಕೊರೋನ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖ ಕಾಣದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯ ಕ್ರಮವಾಗಿ ಕಳೆದ ವಾರ ವಿಧಿಸಿದಂತೆ ಈ (ಆಗಸ್ಟ್ 14 ಮತ್ತು 15) ವಾರವೂ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆವಿ ರಾಜೇಂದ್ರ ಅವರು ಹೇಳಿದ್ದಾರೆ. ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿ ಇರಲಿದ್ದು, ಅಗತ್ಯ ವಸ್ತುಗಳ ಖರೀದಿಗೆ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು ಈ ಅವಧಿಯಲ್ಲಿ ಅಗತ್ಯ ವಸ್ತುಗಳನ್ನು ಖರೀದಿಸಬಹುದು. ಬಳಿಕ ಅನಗತ್ಯವಾಗಿ ತಿರುಗಾಡಬಾರದು. ವಾರಾಂತ್ಯ ಕರ್ಫ್ಯೂ ವೇಳೆ ಯಾವುದೇ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶವಿಲ್ಲ. ಅಲ್ಲದೆ ಶನಿವಾರ ನಡೆಸಲು ಉದ್ದೇಶಿಸಲಾಗಿದ್ದ ಮಂಗಳೂರು ವಿವಿ ಪದವಿ ಪರೀಕ್ಷೆಯನ್ನು ಕೂಡ ಮುಂದೂಡಲಾಗಿದೆ. ರವಿವಾರ ಸ್ವಾತಂತ್ರೋತ್ಸವವನ್ನು ಕೂಡ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು