Sunday, January 19, 2025
ಬಂಟ್ವಾಳ

ಹಲವು ಪ್ರಕರಣಗಳ ವಾರೆಂಟ್ ಆರೋಪಿ ಆರೆಸ್ಟ್: ಬಂಟ್ಟಾಳ ಡಿವೈಎಸ್ಪಿ ವಿಶೇಷ ತಂಡದಿ0ದ ಕಾರ್ಯಚರಣೆ-ಕಹಳೆ ನ್ಯೂಸ್

ಬಂಟ್ವಾಳ: ಹಲವಾರು ಪ್ರಮುಖ ಪ್ರಕರಣದ ಆರೋಪಿಯನ್ನು ಬಂಟ್ವಾಳ ಡಿ.ವೈ.ಎಸ್.ಪಿ. ವಲೆಂಟೈನ್ ಡಿ.ಸೋಜ ನೇತೃತ್ವದ ವಿಶೇಷ ತಂಡ ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಮಂಗಳೂರು ತಾಲೂಕಿನ ಜೊಕಟ್ನ ನಿವಾಸಿ ರಿಜ್ಞಾನ್ ಯಾನೆ ರಿಚ್ಯು ಎಂದು ತಿಳಿದುಬಂದಿದೆ. ಬಂಟ್ವಾಳ ನಗರ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದನ ಕಳ್ಳತನ ಸೇರಿದಂತೆ ಅನೇಕ ಪ್ರಕರಣಗಳಿಗೆ ಸಂಬ0ಧಿಸಿದ0ತ ಈತನ ಮೇಲೆ ಪ್ರಕರಣಗಳು ದಾಖಲಾಗಿತ್ತು. ಈ ಪ್ರಕರಣಗಳಿಗೆ ಸೇರಿದಂತೆ ಈತ ನ್ಯಾಯಾಲಯಕ್ಕೆ ಹಾಜರಾಗದೆ ಇದ್ದ ಕಾರಣ ಈತನ ಮೇಲೆ ವಾರೆಂಟ್ ಜಾರಿಯಾಗಿದ್ದರೂ ತಲೆಮರೆಸಿಕೊಂಡು ತಿರುಗಾಡುವ ಬಗ್ಗೆ ಮಾಹಿತಿ ಪಡೆದ ಬಂಟ್ವಾಳ ಡಿ.ವೈ.ಎಸ್.ಪಿ. ವಲೆಂಟೈನ್ ಡಿ.ಸೋಜ ಅವರ ತಂಡ ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು