ಮೂಡುಬಿದಿರೆ ಕಲ್ಲಬೆಟ್ಟಿನಲ್ಲಿರುವ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ- ಕಹಳೆ ನ್ಯೂಸ್
ಮೂಡಬಿದ್ರೆ: ಕಲ್ಲಬೆಟ್ಟಿನಲ್ಲಿರುವ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಮೂಡಬಿದಿರೆ ತಹಶಿಲ್ದಾರ್ ಪುಟ್ಟರಾಜು ಡಿ.ಎ. ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರಕುವಲ್ಲಿ ಹಲವಾರು ಮಹಾತ್ಮರ ಬಲಿದಾನ ಹಾಗೂ ತ್ಯಾಗದ ಸಂದೇಶವನ್ನು ಸ್ಮರಿಸಿಕೊಳ್ಳುವುದರ ಜತೆಗೆ ನಮ್ಮಲ್ಲಿ ದೇಶಪ್ರೇಮವನ್ನು ಬೆಳೆಸಿಕೊಳ್ಳಬೇಕೆಂದು ಕರೆ ನೀಡಿದರು.
ಕರ್ನಾಟಕ ರಾಜ್ಯ ಸರಕಾರದ ಮಾಜಿ ಸಚಿವರು ಹಾಗೂ ಸಂಸ್ಥೆಯ ಗೌರವ ಅಧ್ಯಕ್ಷರಾದ ಅಭಯಚಂದ್ರ ಜೈನ್ ಮಾತನಾಡುತ್ತಾ ಅಂದು ಭಾರತೀಯರನ್ನು ಕೀಳಾಗಿ ಕಾಣುತ್ತಿದ್ದ ಬ್ರಿಟೀಷರ ವಿರುದ್ದ ದೇಶಪ್ರೇಮಿಗಳು ಸ್ವಾಭಿಮಾನಕ್ಕಾಗಿ ಸ್ವಾತಂತ್ರ್ಯ ಎನ್ನುವ ನೆಲೆಯಲ್ಲಿ ಹೋರಾಟ ನಡೆಸಿದರು. ಅಂದು ನಮ್ಮ ಹಿರಿಯರು ಮಾಡಿದ ತ್ಯಾಗದ ಫಲವನ್ನು ಇಂದು ನಾವೆಲ್ಲರೂ ಅನುಭವಿಸುತ್ತಿದ್ದೇವೆ. ಭಾರತ ಕಳೆದ 74 ವರ್ಷಗಳಲ್ಲಿ ಇದ್ದಂತೆ ಇಲ್ಲ. ಎಲ್ಲ ಕ್ಷೇತ್ರಗಳಲ್ಲಿ ಅಭಿವೃದ್ಧಿಯತ್ತ ಮುನ್ನುಗ್ಗುತ್ತಿದ್ದೇವೆ. ಎಕ್ಸಲೆಂಟ್ ವಿದ್ಯಾಸಂಸ್ಥೆಯು ನಮ್ಮ ಮೂಡಬಿದಿರೆ ವ್ಯಾಪ್ತಿಯಲ್ಲಿ ವಿದ್ಯಾಕಾಶಿಯನ್ನು ನಿರ್ಮಿಸುವಲ್ಲಿ ಮುನ್ನಡೆಯುತ್ತಿದೆ ಇದೊಂದು ಹೆಮ್ಮೆಯ ವಿಷಯ ಎಂದು ನುಡಿದರು. ವಿದ್ಯಾಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ತಮ್ಮ ಅಧ್ಯಕ್ಷೀಯ ಭಾಷಣ ಮಾಡುತ್ತಾ ಒಬ್ಬ ವ್ಯಕ್ತಿ ಸತ್ತ ನಂತರವೂ ಸಮಾಜ ಸದಾ ಸ್ಮರಿಸುವ ಹಾಗೆ ಉತ್ತಮ ಕಾರ್ಯಗಳನ್ನು ಮಾಡಬೇಕು ಅವನು ತನಗಾಗಿ ಮಾಡಿಕೊಂಡ ಕಾರ್ಯಕ್ಕಿಂತ ಸಮಾಜಕ್ಕಾಗಿ ಮಾಡಿದ ಕಾರ್ಯ ಹೆಚ್ಚು ಕಾಲ ಜನ ಮಾನಸದಲ್ಲಿ ಉಳಿಯುತ್ತದೆ ಆದುದರಿಂದ ಈ 75ನೇ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ನಾವುಗಳು “ಸಮಾಜವು ಸದಾ ನಮ್ಮನ್ನ ಸ್ಮರಿಸುವ ಕಾರ್ಯಗಳನ್ನ ಮಾಡುತ್ತೇವೆ” ಎನ್ನುವ ಪ್ರತಿಜ್ಞೆಯನ್ನು ಕೈಗೊಳ್ಳಬೇಕು ಎಂದರು. ಕಾರ್ಯಕ್ರಮವನ್ನು ಆಂಗ್ಲಭಾಷಾ ವಿಭಾಗ ಮುಖ್ರಸ್ಥ ವಿಕ್ರಮ್ ನಾಯಕ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಈ ಸಂದರ್ಭದಲ್ಲಿ ಕಾರ್ಯದರ್ಶಿ ರಶ್ಮಿತಾ ಯುವರಾಜ್ ಜೈನ್, ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ, ಮುಖ್ಯೋಪಾಧ್ಯಾಯ ಶಿವಪ್ರಸಾದ್ ಭಟ್, ಆಡಳಿತಾಧಿಕಾರಿ ಹರೀಶ್ ಶೆಟ್ಟಿ, ಉಪನ್ಯಾಸಕ ವರ್ಗದವರು, ಬೋಧಕೇತರ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು..