
ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ 75 ನೇ ಸ್ವಾತಂತ್ರೋತ್ಸವವನ್ನು ಸರಳವಾಗಿ ಆಚರಿಸಲಾಯಿತು. ಶಾಲೆಯ ಸಂಚಾಲಕ ಚಂದ್ರಶೇಖರ ನಾಯರ್ ಧ್ವಜಾರೋಹಣ ಮಾಡಿದರು. ಈ ಸಂದರ್ಭ ಅನುಗ್ರಹ ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷ ಗಣೇಶ್ ನಾಯರ್, ಮುಖ್ಯೋಪಾಧ್ಯಾಯಿನಿ ವಿದ್ಯಾರತ್ನ, ದೈಹಿಕ ಶಿಕ್ಷಣ ಶಿಕ್ಷಕ ದಿನಕರ ದೇರಪ್ಪಜ್ಜನ ಮನೆ, ಶಿಕ್ಷಕ ಯೋಗನಾಥ್ ಮತ್ತಿತರರು ಉಪಸ್ಥಿತರಿದ್ದರು.