Recent Posts

Monday, January 20, 2025
ಬೆಳ್ತಂಗಡಿ

ಬಂದಾರು ಗ್ರಾಮ ಪಂಚಾಯತ್‍ನ ಮೊಗ್ರು ಬೂತ್-1 ರ ಗ್ರಾಮಸ್ಥರಿಗೆ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಪಿಂಚಣಿ ಅದಾಲತ್ ಕಾರ್ಯಕ್ರಮ-ಕಹಳೆ ನ್ಯೂಸ್

ಬಂದಾರು ಗ್ರಾಮ ಪಂಚಾಯತ್‍ನ ಮೊಗ್ರು ಬೂತ್-1 ರ ಗ್ರಾಮಸ್ಥರಿಗೆ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ವಿವಿಧ ಜನಪರ ಕಾರ್ಯಕ್ರಮಗಳಲ್ಲಿ ಒಂದಾದ ಪಿಂಚಣಿ ಅದಾಲತ್ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಂಧ್ಯಾ ಸುರಕ್ಷಾ ವಿಧವಾ ವೇತನ ಮನಸ್ವಿ ಯೋಜನೆ ಮುಂತಾದ ಪಿಂಚಣಿ ಯೋಜನೆಗಳ ಮಾಹಿತಿ ಹಾಗೂ ಅರ್ಜಿ ಸಲ್ಲಿಸಲು ಅದಾಲತ್ ಕಾರ್ಯಾಗಾರ ಮುಗೇರಡ್ಕದಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷರಾದ ಶ್ರೀಮತಿ ಪರಮೇಶ್ವರಿ. ಕೆ.ಗೌಡ, ಉಪಾಧ್ಯಕ್ಷರಾದ ಗಂಗಾಧರ, ಸದಸ್ಯರಾದ ಶ್ರೀ ಬಾಲಕೃಷ್ಣ ಗೌಡ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ,ಕೆ., ಗ್ರಾಮ ಕರಣಿಕರಾದ ರಫೀಕ್ ಮುಲ್ಲಾ, ವಕೀಲರಾದ ಉದಯ.ಬಿ.ಕೆ ಪಂಚಾಯತ್ ಸಿಬ್ಬಂದಿಗಳಾದ ಕೇಶವ, ಪ್ರವೀಣ್,ಬಿ, ಪ್ರತೀಕ್ ರಾಜ್ ಹಾಗೂ ಗ್ರಾಮಸ್ಥರು. ಉಪಸ್ಥಿತರಿದ್ದರು,

 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು