Recent Posts

Monday, January 20, 2025
ಉಡುಪಿ

ಖಾಸಗಿ ಬಸ್‌ಗಳಲ್ಲಿ ಸಂಚರಿಸುವ ವಿದ್ಯಾರ್ಥಿಗಳಿಗೆ ದರ ರಿಯಾಯಿತಿಯನ್ನು ನೀಡುವಂತೆ ಉಡುಪಿ ವಿದ್ಯಾರ್ಥಿ ಪರಿಷತ್ತಿನ ಕಾರ್ಯಕರ್ತರಿಂದ ಮನವಿ-ಕಹಳೆ ನ್ಯೂಸ್

ಉಡುಪಿ: ಖಾಸಗಿ ಬಸ್ ಗಳಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಪ್ರಯಾಣಕ್ಕೆ ಅವಕಾಶವನ್ನು ಈ ಹಿಂದೆಯಿAದಲೂ ನೀಡುತ್ತಾ ಬಂದಿದ್ದು, ಸಧ್ಯದ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ದರವನ್ನು ಸ್ಥಗಿತಗೊಳಿಸಲಾಗಿದೆ. ಈ ವಿಷಯವಾಗಿ ಕರ್ನಾಟಕ ರಾಜ್ಯ ಖಾಸಗಿ ಬಸ್ಸು ಮಾಲೀಕರ ಸಂಘದ ಅಧ್ಯಕ್ಷರಾದ ಶ್ರೀ ಕುಯಿಲಾಡಿ ಸುರೇಶ್ ನಾಯಕ್ ಅವರನ್ನು ವಿದ್ಯಾರ್ಥಿ ಪರಿಷತ್ತಿನ ಕಾರ್ಯಕರ್ತರು ಭೇಟಿಯಾಗಿ ಮನವಿ ಸಲ್ಲಿಸಿದರು. ಮನವಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸಿದ ಅಧ್ಯಕ್ಷರು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆಗಸ್ಟ್ ೩೦ರ ವರೆಗೆ ಕಾಲೇಜು ವಿದ್ಯಾರ್ಥಿಗಳಿಗೆ ಕಾಲೇಜ್ ಐಡಿ ಮುಖಾಂತರ ರಿಯಾಯಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಎಬಿವಿಪಿ ಜಿಲ್ಲಾ ಸಹಸಂಚಾಲಕರಾದ ಆಶಿಶ್ ಶೆಟ್ಟಿ ನಗರ ಕಾರ್ಯದರ್ಶಿ ಸುಮುಖ ಭಟ್, ವಿದ್ಯಾರ್ಥಿ ಪ್ರಮುಖರಾದ ಶ್ರೀಷ ಭಟ್, ಜಿತೇಂದ್ರ, ಶ್ರೀಹರಿ ಹಾಗೂ ಗಣಪತಿ ಹೆಬ್ಬಾರ್ ಉಪಸ್ಥಿತರಿದ್ದರು.

ಜಾಹೀರಾತು

ಜಾಹೀರಾತು
ಜಾಹೀರಾತು