Recent Posts

Monday, January 20, 2025
ಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ತಾಯಿಯನ್ನು ಅತ್ಯಾಚಾರ ನಡೆಸಿ ಗರ್ಭವತಿಯನ್ನಾಗಿಸಿ ಮಗ ಪರಾರಿ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳು: ಬೆಳ್ತಂಗಡಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ ಯುವಕ-ಕಹಳೆ ನ್ಯೂಸ್

ಬೆಳ್ತಂಗಡಿ : ಸಾಮಾಜಿಕ ಜಾಲತಾಣಗಳಲ್ಲಿ ಯಾರೋ ಕಿಡಿಗೇಡಿಗಳು ಲಾಯಿಲದ ಯುವಕನ ಮೇಲೆ ಅಶ್ಲೀಲವಾಗಿ ಅಪಪಚಾರ ಮಾಡಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

                                     
ಲಾಯಿಲ ಸಮೃದ್ಧಿ ನಿವಾಸದ ಸುಶಾನ್ ಚಂದ್ರ ಎಂಬ ಯುವಕನ ಬಗ್ಗೆ ಇತ್ತೀಚೆಗೆ ವಾಟ್ಸಪ್ ಹಾಗೂ ಫೇಸ್ ಬುಕ್ ನಲ್ಲಿ ಅಶ್ಲೀಲವಾಗಿ ಅಪಪ್ರಚಾರ ಮಾಡಲಾಗಿದೆ. ಈ ಬಗ್ಗೆ ಯುವಕ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ ಎಂದು ತಿಳಿದುಬಂದಿದೆ.
ಲಾಯಿಲ ಗ್ರಾಮದಲ್ಲಿ ಯುವಕನೋರ್ವ ತನ್ನ ತಾಯಿಯನ್ನು ನಿರಂತರವಾಗಿ ಅತ್ಯಾಚಾರ ಮಾಡಿ ಗರ್ಭ ಧರಿಸುವಂತೆ ಮಾಡಿ ಪರಾರಿಯಾಗಿದ್ದಾನೆ. ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಾಗಿ ಶೋಧ ನಡೆಸಲಾಗುತ್ತಿದೆ. ಈ ವಿಕೃತ ಕಾಮಿಯ ಹೆಸರು ಸುಶನ್ ಚಂದ್ರ ೫೬ ಅಡಿ ಎತ್ತರವಿದ್ದು, ಗುಂಗುರು ಕೂದಲು ಹೊಂದಿರುತ್ತಾನೆ. ಎಲ್ಲಿಯಾದರೂ ಕಂಡರೆ ದಯಮಾಡಿ ಕೆಳಗಿನ ನಂಬರಿಗೆ ಕರೆಮಾಡಬೇಕಾಗಿ ವಿನಂತಿ ಎಂದು ದೂರವಾಣಿ ಸಂಖ್ಯೆ ನೀಡುವುದರೊಂದಿಗೆ ಅಪಪ್ರಚಾರ ಮಾಡಲಾಗಿದೆ ಎಂದು ಯುವಕ ದೂರಿನಲ್ಲಿ ತಿಳಿಸಿದ್ದಾನೆ.

ಜಾಹೀರಾತು
ಜಾಹೀರಾತು
ಜಾಹೀರಾತು