Recent Posts

Sunday, January 19, 2025
ಸುದ್ದಿ

ಮಂಗಳೂರಿನಲ್ಲಿ ರೈಲಿನಡಿಗೆ ಸಿಲುಕಿ ಇಬ್ಬರು ಮಹಿಳೆಯರ ದಾರುಣ ಸಾವು- ಕಹಳೆ ನ್ಯೂಸ್

ಮಂಗಳೂರು: ಮಹಾಕಾಳಿ ಪಡ್ಪು ಎಂಬಲ್ಲಿ ಹಳಿ ದಾಟುವಾಗ ರೈಲಿನಡಿಗೆ ಸಿಲುಕಿ ಮಹಿಳೆಯರಿಬ್ಬರು ಪ್ರಾಣ ಕಳೆದುಕೊಂಡಿರುವ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ. ಸಾವನ್ನಪ್ಪಿದ ಮಹಿಳೆಯರಿಬ್ಬರು, ಬೀಡಿ ಕೊಡಲೆಂದು ಬೀಡಿ ಬ್ರೆಂಚ್ ಗೆ ಹೋಗುವಾಗ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಭೇಟಿ ನೀಡಿ ರೈಲ್ವೆ ಪೆÇಲೀಸರು ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಪಾರ್ಥಿವ ಶರೀರವನ್ನು ವೆನ್ಲಾಕ್ ಆಸ್ಪತ್ರೆಗೆ ರವಾನಿಸಲಾಗಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು