Sunday, January 19, 2025
ಕಡಬ

ಛಾತ್ರ ಯುವ ಸಂಘರ್ಷ ಸಮಿತಿ ಕರ್ನಾಟಕ ವತಿಯಿಂದ ನಡೆದ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಕಡಬ ಯುವ ಸಾಹಿತಿ ಸಮ್ಯಕ್ತ್ ಜೈನ್ ಗೆ ತೃತೀಯ ಸ್ಥಾನ- ಕಹಳೆ ನ್ಯೂಸ್

ಕಡಬ: 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಛಾತ್ರ ಯುವ ಸಂಘರ್ಷ ಸಮಿತಿ ಕರ್ನಾಟಕ ವತಿಯಿಂದ ವಿದ್ಯಾರ್ಥಿಗಳಿಗಾಗಿ ರಾಜ್ಯಮಟ್ಟದ ಭಾಷಣ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಇದರಲ್ಲಿ ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಶ್ರೀ ಧರಣೇಂದ್ರ ಇಂದ್ರ ಮತ್ತು ಮಂಜುಳಾ ದಂಪತಿಯ ಸುಪುತ್ರರಾದ ಸಮ್ಯಕ್ತ್ ಜೈನ್ ತೃತೀಯ ಸ್ಥಾನವನ್ನು ಪಡೆದು ಸಂಸ್ಥೆಯಿಂದ ಕೊಡಲ್ಪಡುವ ಪುರಸ್ಕಾರಕ್ಕೆ ಭಾಜನರಾಗಿರುವ ಸಮ್ಯಕ್ತ್ ಕವಿ , ಸಾಹಿತಿ, ಕಾರ್ಯಕ್ರಮದ ನಿರೂಪಕ, ವಾಗ್ಮಿಯಾಗಿ ,ಅಭಿನಯಕಾರರಾಗಿ ಗುರುತಿಸಿಕೊಂಡಿದ್ದಾರೆ. ಪ್ರಸ್ತುತ ಸಾಫಿಯೆನ್ಶಿಯಾ ಬೆಥನಿ ಕಾಲೇಜು ನೆಲ್ಯಾಡಿಯಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾಭ್ಯಾಸವನ್ನು ಮುಂದುವರೆಸುತ್ತಿರುವ ಇವರು ರಾಜ್ಯ ಮಟ್ಟದ ಕಾವ್ಯ ಜ್ಯೋತಿ ಪ್ರಶಸ್ತಿ , ಡಾ.ಕವಿತಾಕೃಷ್ಣ ಗೌರವಾರ್ಥ ಪ್ರಶಸ್ತಿ , ಕಾವ್ಯ ಜ್ಯೋತಿ ಪ್ರಶಸ್ತಿ ಸೇರಿದಂತೆ ಹಲವಾರು ಪುರಸ್ಕಾರಗಳಿಗೆ ಈ ಮೊದಲು ಭಾಜನರಾಗಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು