Sunday, January 19, 2025
ರಾಷ್ಟ್ರೀಯಸಂತಾಪಸುದ್ದಿ

ಅಧಿಕಾರಕ್ಕಿಂತ ಶ್ರೀರಾಮ ಮಂದಿರವೇ ಮುಖ್ಯ ಎಂದು ನಿರೂಪಿಸಿದ್ದ, ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಇನ್ನಿಲ್ಲ – ಕಹಳೆ ನ್ಯೂಸ್

ನವದೆಹಲಿ: ಬಿಜೆಪಿ ನಾಯಕ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್(89) ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಅವರು ರಾಜೀವ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಆಸ್ಪತ್ರೆಯಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇದ್ದಕ್ಕಿದ್ದಂತೆ ದೇಹ ಊದಿಕೊಂಡು, ಪ್ರಜ್ಞಾ ಹೀನರಾಗಿದ್ದ ಹಿನ್ನೆಲೆಯಲ್ಲಿ ಜುಲೈ 4ರಂದು ಕಲ್ಯಾಣ್ ಸಿಂಗ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಲಕ್ನೋದ ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಲ್ಯಾಣ್ ಸಿಂಗ್ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟಿದೆ ಎಂದು ವೈದ್ಯರು ತಿಳಿಸಿದ್ದರು. ಹೀಗಾಗಿ ಅವರಿಗೆ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಎಸ್‍ಜಿಪಿಜಿಐಎಂಎಸ್‍ಗೆ ಸ್ಥಳಾಂತರಿಸುವ ಮೊದಲು ಅವರನ್ನು ಮೊದಲು ರಾಮ ಮನೋಹರ ಲೋಹಿಯಾ ಆಸ್ಪತ್ರೆಗೆ ದಾಖಲಿಸಲಾಯಿತು.