Wednesday, November 20, 2024
ಉಡುಪಿ

ನಾರಾಯಣ ಗುರು ಹೆಸರಿನಲ್ಲಿ ನಿಗಮ ಸ್ಥಾಪನೆಗೆ ಸರಕಾರದಿಂದ ಚಿಂತನೆ: ಸಚಿವ ಸುನೀಲ್ ಕುಮಾರ್-ಕಹಳೆ ನ್ಯೂಸ್

ಉಡುಪಿ: ಬಿಲ್ಲವ ಸಮುದಾಯ ಹಲವು ಸಮಸ್ಯೆಗಳಿಗೆ ಪರಿಹಾರ ಹಾಗೂ ಆರ್ಥಿಕವಾಗಿ ಇನ್ನಷ್ಟು ಚೇತನ ನೀಡುವ ನಿಟ್ಟಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ನಿಗಮ ಸ್ಥಾಪಿಸುವ ಬಗ್ಗೆ ಸರಕಾರ ಚಿಂತನೆ ನಡೆಸಿದೆ ಎಂದು ರಾಜ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಉಡುಪಿ ಜಿಲ್ಲಾಡಳಿತದ ಆಶ್ರಯದಲ್ಲಿ ಉಡುಪಿ ಬನ್ನಂಜೆಯ ಬಿಲ್ಲವರ ಸೇವಾ ಸಂಘದ ಸಹಕಾರದೊಂದಿಗೆ ಇಂದು ಬನ್ನಂಜೆ ಶ್ರೀನಾರಾಯಣ ಗುರು ಮಂದಿರದ ಸಭಾಂಗಣದಲ್ಲಿ ಆಯೋಜಿಸಲಾದ ಬ್ರಹ್ಮಶ್ರೀ ನಾರಾಯಣಗುರು ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಬಗ್ಗೆ ಮುಖ್ಯಮಂತ್ರಿ ಜೊತೆ ಮಾತುಕತೆ ನಡೆಸಿದ್ದು, ಇದಕ್ಕೆ ಅವರು ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ. ಇನ್ನೊಂದು ಸುತ್ತಿನ ಮಾತುಕತೆಯ ಬಳಿಕ ಈ ಸಂಬಂಧ ಅತ್ಯಂತ ಶೀಘ್ರವೇ ಕಾರ್ಯ ಯೋಜನೆಗಳನ್ನು ರೂಪಿಸಲಾಗುವುದು. ಮುಂದೆ ನಿಗಮದ ಘೋಷಣೆಯನ್ನು ಮಾಡಲಾಗುವುದು ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಕಳ ಭುವನೇಂದ್ರ ಕಾಲೇಜಿನ ಪ್ರಾಂಶುಪಾಲ ಮಂಜುನಾಥ್ ಕೋಟ್ಯಾನ್ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಕೆ.ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್.ನಾಯಕ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಬನ್ನಂಜೆ ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಆನಂದ ಪೂಜಾರಿ, ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಪಂ ಸಿಇಓ ಡಾ. ನವೀನ್ ಭಟ್, ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಉಪಸ್ಥಿತರಿದ್ದರು