ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ಕಾರ್ಯ ನಿರ್ವಹಣಾ ತಂಡದ ಸಭೆಯನ್ನು ಉದ್ಘಾಟಿಸಿದ ದಕ್ಷಿಣ ಶಾಸಕರಾದ ಶ್ರೀ ಡಿ ವೇದವ್ಯಾಸ ಕಾಮತ್- ಕಹಳೆ ನ್ಯೂಸ್
ಮಂಗಳೂರು: ಭುವನೇಂದ್ರ ಸಭಾಭವನದಲ್ಲಿ ನಗರ ದಕ್ಷಿಣ ಮಂಡಲ ಅಧ್ಯಕ್ಷರಾದ ಶ್ರೀ ವಿಜಯ ಕುಮಾರ್ ಶೆಟ್ಟಿ ಯವರ ಅದ್ಯಕ್ಷತೆಯಲ್ಲಿ ನಡೆದ ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ಕಾರ್ಯ ನಿರ್ವಹಣಾ ತಂಡದ ಸಭೆಯನ್ನು ಉದ್ಘಾಟಿಸಿದ ಮಂಗಳೂರು ದಕ್ಷಿಣ ಶಾಸಕರಾದ ಶ್ರೀ ಡಿ ವೇದವ್ಯಾಸ ಕಾಮತ್ ಬಳಿಕ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ದಿನ ಪ್ರಯುಕ್ತ, ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಿದರು. ನಂತರ ಉದ್ಘಾಟನಾ ಭಾಷಣದಲ್ಲಿ ಮಾತನಾಡಿದ ಅವರು ಕೋರೋನದಂತಹ ಸಂಧಿಘ್ನ ಪರಿಸ್ಥಿತಿಯಲ್ಲಿ ಕೇಂದ್ರ ಸರಕಾರದ ಉಚಿತ ಲಸಿಕೆ ಕಾರ್ಯಕ್ರಮವನ್ನು ಶ್ಲಾಗಿಸಿದರು ಹಾಗೂ ಮಂಗಳೂರು ನಗರದ ಅಭಿವದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಬಿಡುಗಡೆಗೊಳಿಸಿರುವ ಅನುದಾನಗಳ ಬಗ್ಗೆ ಮಾಹಿತಿಯನ್ನು ನೀಡಿದರು.
ಈ ಸಂದರ್ಭ ವೇದಿಕೆಯಲ್ಲಿ ಮೈಸೂರು ಎಲೆಕ್ಟ್ರಿಕಲ್ಸ್ ಕಂಪನಿ ಅಧ್ಯಕ್ಷರಾದ ಶ್ರೀ ಸಂತೋμï ಕುಮಾರ್ ಬೋಳಿಯಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ಕಸ್ತೂರಿ ಪಂಜ, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಪ್ರಭಾರಿ ಶ್ರೀ ಭಾರತೀಶ್ ಕೊಡಗು, ಸಹ ಪ್ರಭಾರಿ ಶ್ರೀ ರಾಜೇಶ್ ಕಾವೇರಿ ಉಪಸ್ಥಿತರಿದ್ದರು.
ಶ್ರೀಮತಿ ಕಸ್ತೂರಿ ಪಂಜ ಅವರು ಮಾತನಾಡಿ, ಪಕ್ಷದ ಸಂಘಟನೆ ಹಾಗೂ ಮುಂದಿನ ಕಾರ್ಯ ಯೋಜನೆ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದರು. ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ರೂಪ ಡಿ ಬಂಗೇರ ರವರು ವಿವಿಧ ಮೋರ್ಚಾಗಳು ಮಂಡಿಸಿದ ವರದಿಗಳನ್ನು ಪಡೆದುಕೊಂಡರು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮಂಡಲ ಅಧ್ಯಕ್ಷರಾದ ಶ್ರೀ ವಿಜಯ ಕುಮಾರ್ ಶೆಟ್ಟಿ ಅವರು ಪಕ್ಷವನ್ನು ಬೂತ್ ಮಟ್ಟದಲ್ಲಿ ಸಂಘಟನೆ ಮಾಡಿ ಪಕ್ಷವನ್ನು ಇನ್ನಷ್ಟು ಬಲಿಷ್ಟ ಗೊಳಿಸಿ ಮುಂದೆ ನಡೆಯುವ ವಿಧಾನ ಸಭಾ ಚುನಾವಣೆಗೆ ಸಿದ್ಧತೆಯನ್ನು ಈಗಿಂದಲೇ ಮಾಡಬೇಕು ಎಂದು ಹೇಳಿದರು.ಈ ವೇಳೆಯಲ್ಲಿ ಸಾಂಸ್ಕøತಿಕ ಪ್ರಕೊಷ್ಟದ ಸದಸ್ಯರ ಘೋಷಣೆಯನ್ನು ಮಾಡಲಾಯಿತು. ಮಂಡಲ ಕೋಶಾದ್ಯಕ್ಷರಾದ ಶ್ರೀ ಶ್ರೀನಿವಾಸ ಶೆಟ್ ಸ್ವಾಗತಿಸಿ, ಮಂಡಲ ಪ್ರದಾನ ಕಾರ್ಯದರ್ಶಿ ಶ್ರೀ ಸುರೇಂದ್ರ ಜೇ ಕಾರ್ಯಕ್ರಮ ನಿರೂಪಿಸಿದರು. ಮಂಡಲ ಉಪಾಧ್ಯಕ್ಷರಾದ ಶ್ರೀ ದೀಪಕ್ ಪೈ ವಯುಕ್ತಿಕ ಗೀತೆಯನ್ನು ಹಾಡಿ, ಮಂಡಲ ಕಾರ್ಯದರ್ಶಿ ಲಲ್ಲೇಶ್ ರವರು ಧನ್ಯವಾದ ಗೈದರು. ಈ ಸಂದರ್ಭದಲ್ಲಿ ಮೀನುಗಾರಿಕಾ ನಿಗಮದ ಅಧ್ಯಕ್ಷರಾದ ಶ್ರೀ ನಿತಿನ್ ಕುಮಾರ್, ಮ ನ ಪಾ ಮಹಾ ಪೌರರಾದ ಶ್ರೀ ಪ್ರೇಮಾನಂದ ಶೆಟ್ಟಿ, ಮೂಡಾ ಅಧ್ಯಕ್ಷರಾದ ಶ್ರೀ ರವಿಶಂಕರ್ ಮಿಜಾರ್ ಮಂಗಳೂರು ನಗರ ದಕ್ಷಿಣ ಮಂಡಲ ಉಪಾಧ್ಯಕ್ಷರಾದ ರಮೇಶ್ ಕಂಡೆಟ್ಟು, ಶ್ರೀ ರಮೇಶ್ ಹೆಗ್ಡೆ ಶ್ರೀ ಅಜಯ್ ಕುಮಾರ್ . ಶ್ರೀ ಕಿರಣ್ ರೈ , ಮಂಡಲದ ಪದಾಧಿಕಾರಿಗಳು , ಮಹಾಶಕ್ತಿ ಕೇಂದ್ರದ ಪದಾಧಿಕಾರಿಗಳು ವಿವಿಧ ಮೋರ್ಚಾಗಳ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳು, ಪ್ರಕೋಷ್ಠದ ಸಂಚಾಲಕರು, ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.