Recent Posts

Sunday, January 19, 2025
ಪುತ್ತೂರು

ಅಂತಿಮ ವರ್ಷದ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟ: ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳಿಗೆ 97% ಫಲಿತಾಂಶ-ಕಹಳೆ ನ್ಯೂಸ್

ಪುತ್ತೂರು: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ಅಂತಿಮ ವರ್ಷದ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗೆ ಜುಲೈ ತಿಂಗಳಿನಲ್ಲಿ ನಡೆಸಿದ ಪರೀಕ್ಷೆಗಳ ಫಲಿತಾಂಶವು ಪ್ರಕಟಗೊಂಡಿದ್ದು, ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು 97% ಫಲಿತಾಂಶದೊಂದಿಗೆ ಉತ್ತಮ ಸಾಧನೆಯನ್ನು ಮಾಡಿದ್ದಾರೆ. ಪರೀಕ್ಷೆಗೆ ಹಾಜರಾದ 318 ವಿದ್ಯಾರ್ಥಿಗಳಲ್ಲಿ 308 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಕಾಲೇಜಿನ ವಿಭಾಗವಾರು ಫಲಿತಾಂಶಗಳ ಪೈಕಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ-100%, ಕಂಪ್ಯೂಟರ್ ಸೈನ್ಸ್-98%, ಸಿವಿಲ್ ಇಂಜಿನಿಯರಿಂಗ್ ವಿಭಾಗ-94% ಮತ್ತು ಇಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗವು 93% ಫಲಿತಾಂಶವನ್ನು ದಾಖಲಿಸಿವೆ. ಕೋವಿಡ್ ಸಂದರ್ಭದ ನಡುವೆಯೂ ಆನ್ಲೈನ್ ತರಗತಿಗಳಿಗೆ ಹಾಜರಾಗಿ ವಿದ್ಯಾರ್ಥಿಗಳು ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸಿ ಉತ್ತಮ ಫಲಿತಾಂಶವನ್ನು ಪಡೆದುಕೊಂಡಿದ್ದಾರೆ ಅವರ ಈ ಸಾಧನೆಯನ್ನು ಶ್ಲಾಘಿಸುತ್ತೇವೆ ಎಂದು ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ತಿಳಿಸಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು