Sunday, January 19, 2025
ಸುದ್ದಿ

ಅಧಿವೇಶನದ ವೇಳೆ ಸಚಿವರು, ಶಾಸಕರು, ಅಧಿಕಾರಿ ವರ್ಗ ಕಡ್ಡಾಯವಾಗಿ ಹಾಜರಿರಬೇಕು:ಯಾರೂ ರಜೆ ಕೇಳುವಂತಿಲ್ಲ: ಸ್ಪೀಕರ್-ಕಹಳೆ ನ್ಯೂಸ್

ಮಂಗಳೂರು: ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ಅಗತ್ಯ ಕಾಮಗಾರಿಗಳನ್ನು ನಿರ್ವಹಿಸಲು ಎಲ್ಲಾ ಶಾಸಕರು ಹಾಗೂ ಅಧಿಕಾರಿಗಳು ಸಂಪೂರ್ಣವಾಗಿ ಜವಾಬ್ದಾರರಾಗಿರುತ್ತಾರೆ, ರಾಜ್ಯದಲ್ಲಿ ಅಂದಾಜು ಒಂದು ಸಾವಿರ ಕೋಟಿ ರೂ. ಈ ರೀತಿಯ ಕಾಮಗಾರಿಗಳಿಂದಾಗಿ ಬಾಕಿ ಉಳಿದಿದ್ದು, ಜಿಲ್ಲಾಧಿಕಾರಿ ಹಾಗೂ ಸಹಾಯಕ ಆಯುಕ್ತರಿಗೆ ಸೇರಿದ ವಿವಿಧ ಪಿಡಿ ಖಾತೆಗಳಲ್ಲಿವೆ ಎಂದು ಹೇಳಿದರು. ನಗರದ ಸಕ್ರ್ಯೂಟ್ ಹೌಸ್‍ನಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ ಕೈಗೊಳ್ಳಲಾದ ಕಾಮಗಾರಿಗಳ ಮಂಜೂರಾತಿ ಹಾಗೂ ಅವುಗಳ ಪ್ರಗತಿ ಪರಿಶೀಲನೆ ಕುರಿತ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮುಂಬರುವ ಸೆಪ್ಟೆಂಬರ್ 13 ರಿಂದ 24ರ ವರೆಗೆ ರಾಜ್ಯ ವಿಧಾನಸಭಾ ಅಧಿವೇಶನ ನಡೆಸಲು ಆದೇಶ ಹೊರಡಿಸಲಾಗಿದೆ. 6 ತಿಂಗಳ ನಂತರ ಅಧಿವೇಶನ ನಡೆಯುತ್ತಿದ್ದು, ಅಧಿವೇಶನವನ್ನು 10 ದಿನಗಳ ಕಾಲ ಯಶಸ್ವಿಯಾಗಿ ನಿರ್ವಹಿಸುವ ಉದ್ದೇಶವಿದೆ. ಈ ಅಧಿವೇಶನದಲ್ಲಿ ಎಲ್ಲಾ ಸಚಿವರು ಹಾಗೂ ಶಾಸಕರು ಕಡ್ಡಾಯವಾಗಿ ಹಾಜರಿರಬೇಕು. ಯಾರೂ ಕೂಡ ಈ ಅವಧಿಯಲ್ಲಿ ರಜೆ ಕೇಳಬಾರದು. ಎಲ್ಲರೂ ಪೂರ್ಣ ಪ್ರಮಾಣದಲ್ಲಿ ಭಾಗವಹಿಸಬೇಕು. ಇದನ್ನು ಈಗಾಗಲೇ ಪತ್ರ ಮುಖೇನ ಸಂಬಂಧಿಸಿದವರಿಗೆಲ್ಲಾ ತಿಳಿಸಲಾಗಿದೆ. ಅದರಂತೆ ಅಧಿಕಾರಿ ವರ್ಗದವರು ಕಡ್ಡಾಯವಾಗಿ ಹಾಜರಿರಬೇಕು ಎಂದು ಹೇಳಿದರು.

ಜಾಹೀರಾತು

ಜಾಹೀರಾತು
ಜಾಹೀರಾತು