Recent Posts

Sunday, January 19, 2025
ಸುದ್ದಿ

ಅಂಬಿಕಾ ಮಹಾವಿದ್ಯಾಲಯದಲ್ಲಿ ಭಗವದ್ಗೀತಾ ಸರಣಿ ಉಪನ್ಯಾಸ ಮಾಲಿಕೆ ಸಮಾರೋಪ – ಕಹಳೆ ನ್ಯೂಸ್

ಪುತ್ತೂರು : ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಮಹಾವಿದ್ಯಾಲಯದ ಸಂಸ್ಕøತ ಮತ್ತು ತತ್ತ್ವಶಾಸ್ತ್ರ ವಿಭಾಗಗಳ ಸಂಯುಕ್ತಾಶ್ರಯದಲ್ಲಿ ಸಂಸ್ಕøತ ಮಾಸಾಚರಣೆ ಹಾಗೂ ಶ್ರೀಕೃಷ್ಣ ಜನ್ಮೋತ್ಸವ ಸಂಭ್ರಮ ಪ್ರಯುಕ್ತ ಶ್ರೀಮದ್ಭಗವದ್ಗೀತೆಯ ಬಗೆಗಿನ ಮೂರು ದಿನದ ಉಪನ್ಯಾಸ ಮಾಲಿಕೆಯ ಸಮಾರೋಪ ಕಾರ್ಯಕ್ರಮವು ಇಂದು ಆನ್ಲೈನ್ ಮೂಲಕ ನಡೆಯಲಿದೆ. ಈ ಸಂದರ್ಭದಲ್ಲಿ ಬೆಂಗಳೂರಿನ ಡಾ. ಜಿ. ಎನ್. ಭಟ್ ಹರಿಗಾರು ‘ಜ್ಞಾನ’ ಎಂಬ ವಿಷಯದ ಬಗೆಗೆ ಉಪನ್ಯಾಸ ನೀಡಲಿದ್ದಾರೆ. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದು, ಕೋಶಾಧಿಕಾರಿ ರಾಜಶ್ರೀ ನಟ್ಟೋಜ ಹಾಗೂ ಅಂಬಿಕಾ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ವಿನಾಯಕ ಭಟ್ಟ ಗಾಳಿಮನೆ ಉಪಸ್ಥಿತರಿರುವರು. ಆಸಕ್ತರು ಈ ಕೆಳಗೆ ನೀಡಲಾಗಿರುವ ಲಿಂಕ್ ಮೂಲಕ ಕಾರ್ಯಕ್ರಮದಲ್ಲಿ ಭಾಗಿಯಾಗಬಹುದು.
ಝೂಮ್ ಮೀಟಿಂಗ್ ಐಡಿ : 9884720154
ಪಾಸ್‍ವರ್ಡ್ : 6WPUJN

ಜಾಹೀರಾತು

ಜಾಹೀರಾತು
ಜಾಹೀರಾತು