Recent Posts

Friday, November 22, 2024
ದಕ್ಷಿಣ ಕನ್ನಡ

ಸೆ.1ರಿಂದ ದ್ವಿತೀಯ ಪಿಯು ಕಾಲೇಜು ಆರಂಭ – ಮಾರ್ಗಸೂಚಿ ಬಿಡುಗಡೆ ಮಾಡಿದ ಜಿಲ್ಲಾಧಿಕಾರಿ – ಕಹಳೆ ನ್ಯೂಸ್

ಮಂಗಳೂರು: ದ.ಕ ಜಿಲ್ಲೆಯಲ್ಲಿ ದ್ವಿತೀಯ ಪಿಯು ಕಾಲೇಜುಗಳನ್ನು ಸೆ.1ರಿಂದ ಪುನರಾರಂಭಿಸಲು ದ. ಕ ಜಿಲ್ಲಾಧಿಕಾರಿ ನಿರ್ಧರಿಸಿದ್ದು, ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದಾರೆ.

ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಅನುಮತಿಯೊಂದಿಗೆ ಹಾಗೂ ಕಾಲೇಜು ಜಂಟಿ ನಿರ್ದೇಶಕ ಅನುಮತಿ ಪಡೆದು ಪ್ರಥಮ ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಭೌತಿಕ ತರಗತಿಗಳನ್ನು ಸೆ.15ರ ಬಳಿಕ ಆರಂಭಿಸಬಹುದು ಎಂದು ಆದೇಶಿಸಿರುವ ಜಿಲ್ಲಾಧಿಕಾರಿಗಳು ಪ್ರಮಾಣಿತ ಕಾರ್ಯಾಚರಣಾ ಪ್ರಕ್ರಿಯೆ (ಎಸ್‍ಒಪಿ) ಅನ್ನು ಅನುಷ್ಠಾನಗೊಳಿಸುವ ಸಂಪೂರ್ಣ ಜವಾಬ್ದಾರಿಯನ್ನು ಆಯಾ ಕಾಲೇಜಿನ ಪ್ರಾಂಶುಪಾಲರು ತೆಗೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ. ಹಾಗೂ ಕೇರಳದಿಂದ ಬರುವ ವಿದ್ಯಾರ್ಥಿಗಳನ್ನು ಏಳು ದಿನಗಳ ಕಾಲ ಕ್ವಾರಂಟೈನ್‍ನಲ್ಲಿ ಇರಿಸಲು ಕಾಲೇಜುಗಳಲ್ಲಿ ಪ್ರತ್ಯೇಕವಾದ ಕೊರೊನಾ ಸೆಂಟರ್‍ಗಳನ್ನು ತೆರೆಯಬೇಕು. ಏಳು ದಿನಗಳ ಕ್ವಾರಂಟೈನ್ ಮುಗಿಸಿದ ವಿದ್ಯಾರ್ಥಿಗಳು ಆರ್‍ಟಿಪಿಸಿಆರ್ ಪರೀಕ್ಷೆ ಮಾಡಿಸಿ ನೆಗೆಟಿವ್ ಪ್ರಮಾಣಪತ್ರದೊಂದಿಗೆ ತರಗತಿಗಳಿಗೆ ಹಾಜರಾಗಬಹುದು. ಕ್ವಾರಂಟೈನ್‍ನಲ್ಲಿರುವ ವಿದ್ಯಾರ್ಥಿಗಳಿಗೆ ಆನ್ ಲೈನ್ ತರಗತಿಗಳಿಗೆ ಹಾಜರಾಗಲು ವ್ಯವಸ್ಥೆ ಮಾಡಬೇಕು” ಎಂದಿದ್ದಾರೆ.
ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗವು ಆರ್‍ಟಿಪಿಸಿಆರ್ ಪರೀಕ್ಷೆ ಮಾಡಿಸಿ ನೆಗೆಟಿವ್ ಪ್ರಮಾಣಪತ್ರ ನೀಡಬೇಕು. ಸ್ಥಳೀಯ ವಿದ್ಯಾರ್ಥಿಗಳಿಗೆ ಪ್ರತ್ಯೇಕ ತರಗತಿಗಳನ್ನು ನಡೆಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು