ಹಂಪನಕಟ್ಟೆ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ೪.೮೦ ಕೋಟಿ ಅನುದಾನದಿಂದ ನಿರ್ಮಾಣವಾಗಲಿರುವ ಜಿ+2 ಮಾದರಿಯ ಕಟ್ಟಡ ಕಾಮಗಾರಿ ಪ್ರಾರಂಭಿಸುವ ಕುರಿತು ಹಾಗೂ ಆರಂಭಿಕ ಸಿದ್ಧತೆಗಳ ಕುರಿತು ಸಭೆ-ಕಹಳೆ ನ್ಯೂಸ್
ಮಂಗಳೂರು: ಹಂಪನಕಟ್ಟೆ ಸರಕಾರಿ ಪದವಿಪೂರ್ವ ಕಾಲೇಜಿಗೆ ಮಂಜೂರುಗೊಳಿಸಿದ 4.80 ಕೋಟಿ ಅನುದಾನದಿಂದ ನಿರ್ಮಾಣವಾಗಲಿರುವ ಜಿ+2 ಮಾದರಿಯ ಕಟ್ಟಡ ಕಾಮಗಾರಿ ಪ್ರಾರಂಭಿಸುವ ಕುರಿತು ಹಾಗೂ ಆರಂಭಿಕ ಸಿದ್ಧತೆಗಳ ಕುರಿತು ಶಾಸಕ ವೇದವ್ಯಾಸ್ ಕಾಮತ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ನೂತನ ಕಟ್ಟಡ ನಿರ್ಮಾಣಕ್ಕೆ ಸ್ಥಳ ಒದಗಿಸಲು ಹಳೆಯ ಕಟ್ಟಡವನ್ನು ನೆಲಸಮಗೊಳಿಸಬೇಕಾಗಿರುವುದರಿಂದ ಸೂಕ್ತ ಕ್ರಮಗಳನ್ನು ಕೈಗೊಂಡು ಅನುಮತಿ ಒದಗಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲಾ ಉಪನಿರ್ದೇಶಕರಿಗೆ ಶಾಸಕರು ಸೂಚನೆ ನೀಡಿದರು. ಹಾಗೂ ಹಂಪನಕಟ್ಟೆ ಸರಕಾರಿ ಪದವಿಪೂರ್ವ ಕಾಲೇಜು ಮತ್ತು ಪ್ರೌಢ ಶಾಲಾ ವಿಭಾಗದಲ್ಲಿ 203 ವಿಧ್ಯಾರ್ಥಿಗಳ ಪಾಠ ಪ್ರವಚನಕ್ಕೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆ ಮಾಡವಂತೆ ಹಾಗೂ ವಿಧ್ಯಾರ್ಥಿಗಳಿಗೆ ಶೌಚಾಲಯ ವ್ಯವಸ್ಥೆ ಬಿ.ಇ.ಡಿ ಕಾಲೇಜು ಆವರಣದಲ್ಲಿನ ಶೌಚಾಲಯಗಳನ್ನು ದುರಸ್ತಿ ಮಾಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ಸ್ಥಳೀಯ ಕಾರ್ಪೋರೇಟರ್ ಹಾಗೂ ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ, ಪಾಲಿಕೆ ನಾಮನಿರ್ದೇಶಿತ ಸದಸ್ಯ ಭಾಸ್ಕರ್ ಚಂದ್ರ ಶೆಟ್ಟಿ, ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಸಿ.ಡಿ ಜಯಣ್ಣ, ಶಿಕ್ಷಣ ಪರಿವೀಕ್ಷಕರಾದ ಶಮಂತ್, ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ವಿಭಾಗದ ಕಾರ್ಯ ನಿರ್ವಾಹಕ ವೇಣುಗೋಪಾಲ್, ಲೋಕೋಪಯೋಗಿ ಇಲಾಖೆಯ ಉಪ ವಿಭಾಗ – 1 ಮಂಗಳೂರು ಇದರ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ರತ್ನಾಕರ್, ಸ್ಮಾರ್ಟ್ ಸಿಟ್ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಚಂದ್ರಕಾಂತ್, ಕಾಲೇಜಿನ ಪ್ರಾಂಶುಪಾಲರಾದ ವಿನ್ಸೆಂಟ್ ಮಸ್ಕರೇನಸ್, ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.