Monday, November 25, 2024
ಸುದ್ದಿ

ಲಸಿಕೆ ಪಡೆಯದಿದ್ದರೆ ರೇಷನ್ ಕಟ್ : ಗೊಂದಲ ಬಗೆಹರಿಸಿದ ಸಚಿವ ಡಾ. ಕೆ. ಸುಧಾಕರ್– ಕಹಳೆ ನ್ಯೂಸ್

ಬೆಂಗಳೂರು – ಕೋವಿಡ್ ಲಸಿಕೆ ಪಡೆಯದವರಿಗೆ ಪಡಿತರ ವಿತರಣೆ ನಿಲ್ಲಿಸುವ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತಾನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ.ಕೆ.ಸುಧಾಕರ್ ಸರ್ಕಾರ ಈ ರೀತಿಯ ಯಾವುದೇ ಸೂಚನೆ ಕೊಟ್ಟಿಲ್ಲ. ಈ ಬಗ್ಗೆ ಸಾರ್ವಜನಿಕರು ಗೊಂದಲಕ್ಕೆ ಒಳಗಾಗಬಾರದು ಎಂದು ಸ್ಪಷ್ಟನೆ ನೀಡಿದ್ದಾರೆ.

ಚಾಮರಾಜನಗರದಲ್ಲಿ ಕೊರೊನಾ ಲಸಿಕೆ ವೇಗ ಹೆಚ್ಚಿಸಲು ಚಾಮರಾಜನಗರ ಜಿಲ್ಲಾಡಳಿತ ವಿಭಿನ್ನ ಅಭಿಯಾನ ಆರಂಭಿಸಿದ್ದು, ವ್ಯಾಕ್ಸಿನೇಷನ್ ಪ್ರಮಾಣಪತ್ರ ತಂದ್ರೆ ಮಾತ್ರ ಪಡಿತರ ವಿತರಣೆ ಮಾಡುವಂತೆ ನ್ಯಾಯಬೆಲೆ ಅಂಗಡಿಗಳಿಗೆ ಜಿಲ್ಲಾಧಿಕಾರಿ ಎಂ.ಆರ್. ರವಿ ಸೂಚನೆ ನೀಡಿದ್ದರು ಎನ್ನಲಾಗಿದ್ದು, ಈ ಬಗ್ಗೆ ಅವರ ಜತೆ ಮಾತನಾಡಿ ಸಮಸ್ಯೆ ಪರಿಹರಿಸುವುದಾಗಿ ಹೇಳಿದರು. ಲಸಿಕೆ ಪಡೆಯದವರಿಗೆ ಪಡಿತರ ಧಾನ್ಯ ನೀಡಬಾರದು ಎಂದು ಸರ್ಕಾರ ಯಾವುದೇ ಅಧಿಕಾರಿಗಳಿಗೆ ನಿರ್ದೇಶನ ನೀಡಿಲ್ಲ. ಸ್ವಯಂ ಪ್ರೇರಿತರಾಗಿ ಲಸಿಕೆ ಪಡೆಯುವುದು ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು. ಆದರೂ ಕೆಲವು ಕಡೆ ಈಗಲೂ ಹಿಂಜರಿಯುತ್ತಿರುವುದು ಬೇಸರ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು