Wednesday, April 16, 2025
ಪುತ್ತೂರು

ವಿವೇಕಾನಂದ ಕಾಲೇಜಿನಲ್ಲಿ ‘ವೋಟರ್ಸ್ ಅವೇರ್‍ನೆಸ್’ ಕಾರ್ಯಾಗಾರ- ಕಹಳೆ ನ್ಯೂಸ್

ಪುತ್ತೂರು: ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯದ ಮತದಾರರ ಸಾಕ್ಷರತಾ ಕ್ಲಬ್ ಹಾಗೂ ಐಕ್ಯುಎಸಿ ಘಟಕಗಳ ಸಂಯುಕ್ತ ಆಶ್ರಯದಲ್ಲಿ ‘ವೋಟರ್ಸ್ ಅವೇರ್‍ನೆಸ್’ ಎಂಬ ವಿಷಯದ ಕುರಿತಾಗಿ ವಿಶೇಷ ಕಾರ್ಯಗಾರ ಆನ್ಲೈನ್ ಮೂಲಕ ನಡೆಯಿತು. ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಉಪನ್ಯಾಸಕಿ ದೀಪಿಕ ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, 18 ವರ್ಷ ಪೂರ್ಣಗೊಂಡ ಕಾಲೇಜಿನ ವಿದ್ಯಾರ್ಥಿಗಳಿಗೆ ಮತದಾರರ ಪಟ್ಟಿಗೆ ನೋಂದಣಿ ಮಾಡಿಕೊಳ್ಳುವ ಕುರಿತಾಗಿ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಪ್ರೊ. ವಿಷ್ಣುಗಣಪತಿ ಭಟ್ ವಹಿಸಿದ್ದರು. ಈ ಸಂದರ್ಭ ಮತದಾರರ ಸಾಕ್ಷರತಾ ಕ್ಲಬ್‍ನ ಸಂಯೋಜಕ, ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಉಪನಾಸಕ ಡಾ. ವಿಷ್ಣುಕುಮಾರ್ ಉಪಸ್ಥಿತರಿದ್ದರು. ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಅನಿತಾ ಕಾಮತ್ ಕಾರ್ಯಕ್ರಮ ನಿರ್ವಹಿಸಿದರು.

 

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ