Recent Posts

Monday, January 20, 2025
ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಕಬಕ ಸ್ವರಾಜ್ಯ ರಥಕ್ಕೆ ಅಡ್ಡಿಪಡಿಸಿ ಪುಂಡಾಟಿಗೆ ಪ್ರಕರಣ ; ಆರೋಪಿಗಳ ನಿರೀಕ್ಷಣಾ ಜಾಮೀನು ತಿರಸ್ಕರಿಸಿದ ನ್ಯಾಯಾಲಯ – ಕಹಳೆ ನ್ಯೂಸ್

ಪುತ್ತೂರು: ಕಬಕ ಗ್ರಾ.ಪಂ ವ್ಯಾಪ್ತಿಯಲ್ಲಿ ನಡೆದ ಗ್ರಾಮ ಸ್ವರಾಜ್ಯ ರಥಕ್ಕೆ ಅಡ್ಡಿ ಪಡಿಸಿದ ಪ್ರಕರಣಕ್ಕೆ ಸಂಬಂಧಿಸಿ ನಿರೀಕ್ಷಣಾ ಜಾಮೀನು ಕೋರಿ ಆರೋಪಿಗಳು ಸಲ್ಲಿಸಿದ ಜಾಮೀನು ಅರ್ಜಿಯನ್ನು 5ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ತಿರಸ್ಕರಿಸಿದೆ.

ಘಟನೆಗೆ ಸಂಬಂಧಿಸಿ 7 ಮಂದಿ ವಿರುದ್ಧ ಪುತ್ತೂರು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಈ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಬಂಧಿತ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ನ್ಯಾಯಾಂಗ ಬಂಧನದಲ್ಲಿದ್ದ ಮೂವರಿಗೆ ಪುತ್ತೂರು ನ್ಯಾಯಲಯ ವಿಚಾರಣೆ ನಡೆಸಿ ಜಾಮೀನು ಮುಂಜೂರು ಮಾಡಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಬಳಿಕ ಉಳಿದ ನಾಲ್ವರು ಆರೋಪಿಗಳಾದ ನೌಶಾದ್, ಮಹಮ್ಮದ್ ಹಾರಿಸ್, ಮಹಮ್ಮದ್ ತೌಸೀಪ್, ಸಂಶುದ್ದೀನ್ ಅವರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. 5ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಆರೋಪಿಗಳ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು