ಮೊಗ್ರು ಗ್ರಾಮದ ಕಂಚಿನಡ್ಕ ಅಂಗನವಾಡಿ ಕೇಂದ್ರದಲ್ಲಿ ಪ್ರಧಾನಮಂತ್ರಿ ಮಾತೃ ವಂದನಾ ಸಪ್ತಾಹ ಮತ್ತು ಪೋಷಣ್ ಮಾಸಾಚರಣೆ ಕಾರ್ಯಕ್ರಮ – ಕಹಳೆ ನ್ಯೂಸ್
ಮೊಗ್ರು: ಮೊಗ್ರು ಗ್ರಾಮದ ಕಂಚಿನಡ್ಕ ಅಂಗನವಾಡಿ ಕೇಂದ್ರದಲ್ಲಿ ಪ್ರಧಾನಮಂತ್ರಿ ಮಾತೃ ವಂದನಾ ಸಪ್ತಾಹ ಮತ್ತು ಪೋಷಣ್ ಮಾಸಾಚರಣೆ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕಣಿಯೂರು ವಲಯ ಮೇಲ್ವಿಚಾರಕ ಶ್ರೀಮತಿ ನಂದನ. ಪಿ. ಪ್ರಧಾನಮಂತ್ರಿ ಮಾತೃ ವಂದನ ಯೋಜನೆಯ ಬಗ್ಗೆ, ಗರ್ಭಿಣಿ ಬಾಣಂತಿಯರಿಗೆ ಪೌಷ್ಟಿಕ ಆಹಾರದ ಮಹತ್ವತೆಯ ಬಗ್ಗೆ, ಮಕ್ಕಳ ತೂಕದ ಬೆಳವಣಿಗೆಯ ಬಗ್ಗೆ, ಆರೋಗ್ಯದ ಬಗ್ಗೆ, ಕರೋನ ಲಸಿಕೆಯ ಮಹತ್ವದ ಬಗ್ಗೆ, ಮಕ್ಕಳಲ್ಲಿ ಕಂಡು ಬರುವ ಅನಾರೋಗ್ಯದ ಬಗ್ಗೆ ಪೋಷಕರು ವಹಿಸಬೇಕಾದ ಎಚ್ಚರಿಕೆಯ ಬಗ್ಗೆ, ಮಾಹಿತಿ ನೀಡಿದರು
ಇದೇ ಸಂದರ್ಭದಲ್ಲಿ ಸಂಜೀವಿನಿ ಒಕ್ಕೂಟದ ಎಂ.ಬಿ.ಕೆ ಮೇಘನಾ ಸಂಜೀವಿನಿ ಸ್ವಸಹಾಯ ಸಂಘದ ಮೂಲಕ ಸರಕಾರದ ಸೌಲಭ್ಯ ಪಡೆಯುವ ಬಗ್ಗೆ ಮಾಹಿತಿ ನೀಡಿದರು. ಸಭೆಯಲ್ಲಿ ಪೌಷ್ಟಿಕ ಪ್ರಾತ್ಯಕ್ಷಿಕೆಯನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಮೇಲ್ವಿಚಾರಕಿ ಶ್ರೀಮತಿ ನಂದನ .ಪಿ, ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ಪ್ರತಿಮಾ, ಸಮಿತಿಯ ಸದಸ್ಯರು, ಶಾಲೆಯ ಶಿಕ್ಷಕಿ, ವ್ಯಾಪ್ತಿಯ ಗರ್ಭಿಣಿಯರು, ಬಾಣಂತಿಯರು, ಮಕ್ಕಳ ಪೋಷಕರು, ಸ್ತ್ರೀಶಕ್ತಿ ಸದಸ್ಯರು, ಕಿಶೋರಿಯರು ಉಪಸ್ಥಿಯಲ್ಲಿದ್ದರು ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಗೌತಮಿ ಕಾರ್ಯಕ್ರಮವನ್ನು ಸ್ವಾಗತಿಸಿ ವಂದಸಿದರು, ಸಹಾಯಕಿ ಶ್ರೀಮತಿ ಲಲಿತಾ ಸಹಕರಿಸಿದರು