Tuesday, January 21, 2025
ಬಂಟ್ವಾಳ

ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರ : ಅಮ್ಟೂರು ಗ್ರಾಮದ ಬೂತ್ ಸಮಿತಿಯ ಅಧ್ಯಕ್ಷರ ಮನೆಗಳಿಗೆ ನಾಮಫಲಕ ಅಳವಡಿಕೆ- ಕಹಳೆ ನ್ಯೂಸ್

ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಅಮ್ಟೂರು ಗ್ರಾಮದ ಬೂತ್ ಸಂಖ್ಯೆ 181ರ ಅಧ್ಯಕ್ಷ ಶ್ರೀಧರ್ ಪೂಜಾರಿ, 182ರ ಅಧ್ಯಕ್ಷ ಪ್ರಭಾಕರ್ ಶೆಟ್ಟಿ, 183ನೇ ಅಧ್ಯಕ್ಷ ವಿಠಲ ಪ್ರಭು ಅವರ ಮನೆಗೆ ಬೇಟಿ ನೀಡಿ ಬೂತ್ ಸಮಿತಿ ಅಧ್ಯಕ್ಷರ ನಾಮಫಲಕ ಅಳವಡಿಸುವ ಕಾರ್ಯಕ್ರಮ ಮಾಡಲಾಯಿತು.


ಬಳಿಕ ಬೂತ್ ಸಮಿತಿ ಕಾರ್ಯಕರ್ತರ ಜೊತೆ ಮಾತನಾಡಿದ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಕೇಂದ್ರ ಹಾಗೂ ರಾಜ್ಯ ಸರಕಾರದ ಜನಪರವಾದ ಯೋಜನೆಗಳನ್ನು ಗ್ರಾಮದ ಪ್ರತಿಯೊಬ್ಬರ ಮನೆಗೆ ತಲುಪಿಸುವ ಮೂಲಕ ಪಕ್ಷಕ್ಕೆ ಬಲತುಂಬುವ ಕೆಲಸ ಬೂತ್ ಮಟ್ಟದ ಕಾರ್ಯಕರ್ತರ ಮೂಲಕ ಆಗಬೇಕಾಗಿದೆ ಎಂದು ಹೇಳಿದರು. ಭಾರತೀಯ ಜನತಾ ಪಾರ್ಟಿಯನ್ನು ಸಂಘಟನಾತ್ಮಕವಾಗಿ ಬೆಳೆಸಲು ಬೂತ್ ಮಟ್ಟದ ಕಾರ್ಯಕರ್ತರ ಶ್ರಮದಿಂದ ಮಾತ್ರ ಸಾಧ್ಯ , ಆ ನಿಟ್ಟಿನಲ್ಲಿ ಕಾರ್ಯಕರ್ತರು ಜೊತೆಯಾಗಿ ಕೆಲಸ ಮಾಡಬೇಕು. ಗ್ರಾಮದ ಅಭಿವೃದ್ಧಿಯ ಜೊತೆಯಲ್ಲಿ ಪಕ್ಷದ ಸಂಘಟನೆಗೆ ಕಾರ್ಯಕರ್ತರು ಹೆಚ್ಚಿನ ಒತ್ತು ನೀಡುವಂತೆ ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು


ಬಳಿಕ ಮಾತನಾಡಿದ ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿಯವರು ಬಿಜೆಪಿ ಕಾರ್ಯಕರ್ತರು ಪಕ್ಷವನ್ನು ಸಂಘಟನಾತ್ಮಕವಾಗಿ ಬೆಳೆಸಿ ಮುಂದಿನ ಎಲ್ಲಾ ಚುನಾವಣೆಯಲ್ಲಿಯೂ ಅಧಿಕಾರ ಪಡೆದುಕೊಂಡು ಗ್ರಾಮದ ಅಭಿವೃದ್ಧಿಯನ್ನು ಮಾಡುವುದರ ಮೂಲಕ ವಿರೋಧ ಪಕ್ಷಗಳ ಟೀಕೆ ಟಿಪ್ಪಣಿಗಳಿಗೆ ಉತ್ತರ ನೀಡುವ ಕೆಲಸ ಮಾಡಬೇಕಾಗಿದೆ ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

   

ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಮಾತನಾಡಿ ಬೂತ್ ಮಟ್ಟದಲ್ಲಿ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಪಕ್ಷದ ಹಿರಿಯರ ನಿರ್ದೇಶನ ದಂತೆ ವಿಶೇಷ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಪ್ರತಿ ಬೂತ್ ಮಟ್ಟದಲ್ಲಿಯೂ ಯಶಸ್ವಿ ಮಾಡುವಂತೆ ತಿಳಿಸಿದರು. ಬಂಟ್ವಾಳದ ಸಮಗ್ರ ಅಭಿವೃದ್ಧಿಯ ಜೊತೆಗೆ ಬಿಜೆಪಿ ಪಕ್ಷ ಸಂಘಟನಾತ್ಮಕವಾಗಿ ಬೆಳೆಯಬೇಕು ಎಂದು ಹೇಳಿದರು.

ಬೂತ್ ಸಂಖ್ಯೆ 182 ರ ಕಾರ್ಯಕ್ರಮದಲ್ಲಿ ಮಾಜಿ ಸೈನಿಕ , ಪಕ್ಷದ ಹಿರಿಯ ಕಾರ್ಯಕರ್ತರನ್ನು ಹಾಗೂ ಆಗಮಿಸಿದ ಪ್ರತಿಯೊಬ್ಬರನ್ನು ಶಾಸಕರ ನೇತ್ರತ್ವದಲ್ಲಿ ಅಭಿನಂದಿಸಲಾಯಿತು. ಬೂತ್ ಮಟ್ಟದ ಅಧ್ಯಕ್ಷರುಗಳ ಮನೆ ಬೇಟಿ ಮಾಡಿ ನಾಮಫಲಕ ಅಳವಡಿಸುವ ಕಾರ್ಯಕ್ರಮದಲ್ಲಿ ಚೆಂಡೆ ಬ್ಯಾಂಡ್ ವಾದ್ಯಗಳಲ್ಲಿ ಶಾಸಕರನ್ನು ಸ್ವಾಗತಿಸಿದ್ದು ವಿಶೇಷ ಆಕರ್ಷಣೆಯಾಗಿತ್ತು.

ಕಾರ್ಯಕ್ರಮದಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ, ಗ್ರಾಮ ಪಂಚಾಯತ್ ಸದಸ್ಯರಾದ ಪವಿತ್ರ , ಗೋಪಾಲಕೃಷ್ಣ ಪೂವಳ, ಸುಷ್ಮಾ, ಪ್ರೇಮ, ಇಲ್ಯಾಸ್, ಜಯಂತ ಗೌಡ , ಲಕ್ಮೀ ವಿ. ಪ್ರಭು, ಲಖಿತ ಆರ್ ಶೆಟ್ಟಿ, ಪ್ರಮುಖರಾದ ಅಭಿಷೇಕ್ ಶೆಟ್ಟಿ, ದಿನೇಶ್ ಅಮ್ಟೂರು, ಗಣೇಶ್ ರೈ ಮಾಣಿ, ರಮನಾಥ ರಾಯಿ, ಮೋನಪ್ಪ ದೇವಸ್ಯ, ವಜ್ರನಾಥ ಶೆಟ್ಟಿ, ಆನಂದ ಶಂಭೂರು , ಜಿತೇಶ್ ಶೆಟ್ಟಿ, ವಿಖ್ಯಾತ್ ಶೆಟ್ಟಿ, ಪ್ರೇಮ ಶೆಟ್ಟಿ, ದೇವಕಿದಿವಾಕರ ಪೂಜಾರಿ, ಇಂದಿರಾ ರೈ, ನಂದಗೋಕುಲ ಮಹಾಬಲ ಶೆಟ್ಟಿ, ತ್ರಿವೇಣಿ ಮತ್ತಿತರರು ಉಪಸ್ಥಿತರಿದ್ದರು.