Wednesday, January 22, 2025
ಪುತ್ತೂರು

ನೆಟ್ಟಾರು:ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ- ಕಹಳೆ ನ್ಯೂಸ್

ಅಕ್ಷಯ ಯುವಕ ಮಂಡಲ(ರಿ)ನೆಟ್ಟಾರು, ಅಕ್ಷತಾ ಮಹಿಳಾ ಮಂಡಲ ನೆಟ್ಟಾರು ಹಾಗೂ ಶಾಲಾಭಿವೃದ್ಧಿ ಸಮಿತಿ ನೆಟ್ಟಾರು ಶಾಲೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ನೆಟ್ಟಾರು ಪರಿಸರದ ಸ್ವಚ್ಛತಾ ಕಾರ್ಯಕ್ರಮ ಸೆ. 05ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕ್ಷಯ ಯುವಕ ಮಂಡಲದ ಅಧ್ಯಕ್ಷ ಶ್ರೀಜಿತ್ ರೈ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಶೇಖರ್ ಪನ್ನೆ ಮಾತನಾಡಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಸೂಚನೆಯಂತೆ ದೇಶಾದ್ಯಂತ 75ನೇ ಸ್ವಾತಂತ್ರ್ಯ ಮಹೋತ್ಸವದ ಕಾರ್ಯಕ್ರಮವನ್ನು ಪ್ರತೀ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 75 ವಿಶಿಷ್ಟ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು.ಅದೇ ರೀತಿ ಬೆಳ್ಳಾರೆಯಲ್ಲೂ ಸಹ ಕಾರ್ಯಕ್ರಮಗಳು ನಡೆಯುತ್ತಿವೆ.ಮೋದಿಯವರ ಸ್ವಚ್ಚ ಭಾರತ ಕಲ್ಪನೆಯಂತೆ ಸಂಘ ಸಂಸ್ಥೆಗಳ ಜೊತೆಗೂಡಿ ನೆಟ್ಟಾರು ಅಕ್ಷಯ ಯುವಕ ಮಂಡಲವು ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಂಡಿದ್ದೀರಿ ನಿಮ್ಮ ಕಾರ್ಯ ಮಾದರಿಯಾಗಲಿ ಎಂದರು.ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಗೌರಿ ನೆಟ್ಟಾರುಅಕ್ಷತಾ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ನಳಿನಿ,ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವಿಶ್ವನಾಥ ,ಉಪಾಧ್ಯಕ್ಷೆ ಉಷಾ ಉಪಸ್ಥಿತರಿದ್ದರು.ಸ್ವಚ್ಛತಾ ಕಾರ್ಯದಲ್ಲಿ ಯುವಕ ಮಂಡಲ ಮಹಿಳಾ ಮಂಡಲ ಸದಸ್ಯರು ಪಾಲ್ಗೊಂಡಿದ್ದರು.

ಜಾಹೀರಾತು

ಜಾಹೀರಾತು
ಜಾಹೀರಾತು