ಉಪ್ಪಿನಂಗಡಿ: ಬುಲೆಟ್ ಟ್ಯಾಂಕರ್ ವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟು ಹಾಗೂ ಅವನ ತಾಯಿ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ ಬೈಪಾಸ್ ನಲ್ಲಿ ನಡೆದಿದೆ. ಅಪಘಾತವೂ ಬೆಂಗಳೂರು -ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದ್ದು, ಉಪ್ಪಿನಂಗಡಿ ಸಮೀಪದ ಕಲ್ಲೇರಿ ನಿವಾಸಿ ಅದ್ವೀತ್ (16) ಮೃತಪಟ್ಟ ಬಾಲಕ, ಅಂಗನವಾಡಿಯಲ್ಲಿ ಟೀಚರ್ ಆಗಿರುವ ಬಾಲಕನ ತಾಯಿ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಾಲಕ ತನ್ನ ತಾಯಿಯ ಜೊತೆ ಉಪ್ಪಿನಂಗಡಿ ತಮ್ಮ ಮನೆಗೆ ಕಡೆಗೆ ತೆರಳುವ ವೇಳೆ ಅಪಘಾತ ಸಂಭವಿಸಿದ್ದು, ಹೆದ್ದಾರಿಯ ಪಕ್ಕದಲ್ಲಿರುವ ಪೆಟ್ರೋಲ್ ಬಂಕಿನಲ್ಲಿ ದ್ವಿ ಚಕ್ರ ವಾಹನಕ್ಕೆ ಪೆಟ್ರೋಲ್ ಹಾಕಿಸಿ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕಿಸುತ್ತಿರುವಾಗ ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ನಿಯಂತ್ರಣ ತಪ್ಪಿ ಬಾಲಕ ಹಾಗೂ ತಾಯಿ ರಸ್ತೆಗೆ ಎಸೆಯಲ್ಪಟ್ಟ ಪರಿಣಾಮ ಗಂಭೀರ ಗಾಯಗೊಂಡ ಬಾಲಕ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ನಗರ ಸಂಚಾರಿ ಠಾಣೆ ಎಸ್ಐ ರಾಮನಾಯ್ಕ ಹಾಗೂ ಸಿಬಂದಿಗಳು ಪರಿಶೀಲನೆ ನಡೆಸಿದ್ದಾರೆ.