
ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ, ಬಪ್ಪಳಿಗೆ ಕ್ಯಾಂಪಸ್‍ನಲ್ಲಿ ಶಿಕ್ಷಕ ದಿನಾಚರಣೆ ಹಾಗೂ ಅಭಿವಂದನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿಶ್ರಾಂತ ಪ್ರಾಧ್ಯಾಪಕ, ವಿದ್ವಾಂಸ ಡಾ.ತಾಳ್ತಜೆ ವಸಂತ ಕುಮಾರ ಭಾಗಿಯಾಗಿದ್ರು. ಬಳಿಕ ಮಾತನಾಡಿದ ಇವರು ಶಿಕ್ಷಕರಾಗುವವರಿಗೆ ಸ್ವಸ್ಥಾನ ಪರಿಜ್ಞಾನ ಇರಬೇಕಾದ್ದು ಅತ್ಯಂತ ಅಗತ್ಯ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ವಹಿಸಿದ್ರು. ಕಾರ್ಯಕ್ರಮದಲ್ಲಿ ನಟ್ಟೋಜ ದಂಪತಿ ಪ್ರೊ.ವತ್ಸಲಾರಾಜ್ಞಿ ಅವರ ಪಾದಪೂಜೆ ನಡೆಸಿ, ಗೌರವ ಸಮರ್ಪಿಸಿದರು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ, ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ, ಅಂಬಿಕಾ ಸಿಬಿಎಸ್‍ಇ ವಿದ್ಯಾಲಯದ ಪ್ರಾಚಾರ್ಯೆ ಮಾಲತಿ ಡಿ ಉಪಸ್ಥಿತರಿದ್ದರು.