Wednesday, January 22, 2025
ಬಂಟ್ವಾಳ

ಇನ್‌ಸ್ಟಾಗ್ರಾಂನಲ್ಲಿ ಪರಿಚಯ : ಅತ್ಯಾಚಾರ ಎಸಗಿ ಆರೋಪಿ ವಿದೇಶಕ್ಕೆ ಪರಾರಿ – ಕಹಳೆ ನ್ಯೂಸ್

ಬಂಟ್ವಾಳ: ಅಪ್ರಾಪ್ತ ಬಾಲಕಿಯೊಂದಿಗೆ ಲೈಂಗಿಕ ಸಂಬಂಧ ಬೆಳೆಸಿ ಬಾಲಕಿ ಗರ್ಭಿಣಿಯಾಗುತ್ತಿದ್ದಂತೆ ಆರೋಪಿ ವಿದೇಶದಲ್ಲಿ ತೆರಳಿ ತಲೆ ಮೆರೆಸಿಕೊಂಡಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಉಪ್ಪಿನಂಗಡಿ ನಿವಾಸಿ ಮಸೂದ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಬಾಲಕಿ ಮಣಿನಾಲ್ಕೂರು ಗ್ರಾಮದ ನಿವಾಸಿಯಾಗಿದ್ದು ಇದೀಗ ಆಕೆ ಬಿ.ಸಿ.ರೋಡಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಗುವಿಗೆ ಜನ್ಮ ನೀಡಿದ್ದು ಘಟನೆ ಬೆಳಕಿಗೆ ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸಂತ್ರಸ್ತೆ ಬಾಲಕಿಗೆ ಆರೋಪಿ ಮಸೂದ್ ಒಂದು ವರ್ಷದ ಹಿಂದೆ ಇನ್ ಸ್ಟಾಗ್ರಾಂ ನಲ್ಲಿ ಪರಿಚಯವಾಗಿದ್ದು ಬಳಿಕ ಆತ ಆಕೆಯ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಬಂದು ಅತ್ಯಾಚಾರ ಎಸಗಿ ಆ ಬಳಿಕ ನಾಪತ್ತೆಯಾಗಿದ್ದಾನೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇದೀಗ ಆರೋಪಿ ತಲೆ ಮರೆಸಿಕೊಂಡಿದ್ದಾನೆ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದ್ದು ಆತನಿಗಾಗಿ ಶೋಧ ಮುಂದುವರಿಸಿದ್ದಾರೆ. ಬಂಟ್ವಾಳ ಪೊಲೀಸ್ ಇನ್ ಸ್ಪೆಕ್ಟರ್ ಟಿ.ಡಿ.ನಾಗರಾಜ್ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.