ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಪೂರ್ಣಕಾಲಿಕ ದೈಹಿಕ ಶಿಕ್ಷಣ ನಿರ್ದೇಶಕರಾಗಿ ಶ್ರೀ ಎಮ್. ಕೆ. ನವೀನ್ ಕುಮಾರ್ ನೇಮಕ- ಕಹಳೆ ನ್ಯೂಸ್
ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಂಗ ಸಂಸ್ಥೆಯಾದ ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಎಮ್. ಕೆ. ನವೀನ್ ಕುಮಾರ್ ಅವರು ವಿವೇಕಾನಂದ ಕಾನೂನು ಮಹಾವಿದ್ಯಾಲದಲ್ಲಿ ಪೂರ್ಣಕಾಲಿಕ ದೈಹಿಕ ಶಿಕ್ಷಣ ನಿರ್ದೇಶಕರಾಗಿ ನೇಮಕಗೊಂಡಿದ್ದು, ಈ ಮೂಲಕ ಕಾನೂನು ವ್ಯಾಸಾಂಗ ಮಾಡುವ ವಿದ್ಯಾರ್ಥಿಗಳಿಗೆ ಕ್ರೀಡಾ ಕ್ಷೇತ್ರದಲ್ಲೂ ಭಾಗವಹಿಸಲು ಉತ್ತೇಜನ ನೀಡಲಾಗುತ್ತಿದೆ.