Saturday, November 16, 2024
ಸುದ್ದಿ

ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಸಿಹಿ ಸುದ್ದಿ ನೀಡಿದ ಇಂಧನ ಸಚಿವ ಸುನಿಲ್ ಕುಮಾರ್ –ಕಹಳೆ ನ್ಯೂಸ್

ಬೆಂಗಳೂರು: ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯುತ್ ಚಾಲಿತ ವಾಹನಗಳು ಬರುತ್ತಿರುವ ಕಾರಣದಿಂದ ಎಲೆಕ್ಟ್ರಿಕ್ ರೀಚಾರ್ಜ್ ಸೆಂಟರ್ ಳನ್ನು ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ತೆರೆಯಲಾಗುವುದು ಎಂದು ರಾಜ್ಯದ ಇಂಧನ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ಕ್ಕೆ ಕಾರ್ಯಕರ್ತರು ಮತ್ತು ಸಾರ್ವಜನಿಕರನ್ನು ಭೇಟಿ ಮಾಡಲು ಆಗಮಿಸಿದ್ದ ಸಚಿವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಎಲೆಕ್ಟ್ರಿಕ್ ವಾಹನ ಸೌಕರ್ಯಕ್ಕಾಗಿ ಎಲ್ಲ ಜಿಲ್ಲಾ ಕೇಂದ್ರಗಳು, ಪ್ರವಾಸೋದ್ಯಮ ಕೇಂದ್ರಗಳಲ್ಲಿ ರೀಚಾರ್ಜ್ ಕೇಂದ್ರ ತೆರೆಯಲು ಬೇರೆ ಬೇರೆ ಎಸ್ಕಾಂಗಳಿಗೆ ಗುರಿ ನೀಡಲಾಗುವುದು. ರಾಜ್ಯದ ಸರಕಾರಿ ಕಛೇರಿಗಳಲ್ಲಿ ಪ್ರೀಪೇಯ್ಡ್ ವಿದ್ಯುತ್ ಮೀಟರ್ ಅಳವಡಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಉತ್ತರ ಕರ್ನಾಟಕದಲ್ಲಿ ಕೃಷಿ ಪಂಪ್‍ಸೆಟ್‍ಗಳಿಗೆ ನಿರಂತರ 7 ಗಂಟೆ ವಿದ್ಯುತ್ ನೀಡಬೇಕೆಂಬ ಬೇಡಿಕೆ ಇತ್ತು. ಇದಕ್ಕಾಗಿ ವಿವಿಧಡೆ 60ಕ್ಕೂ ಹೆಚ್ಚು ಸಬ್ ಸ್ಟೇಷನ್‍ಗಳನ್ನು ಇನ್ನು 100 ದಿನಗಳ ಒಳಗೆ ಕೆಪಿಟಿಸಿಎಲ್ ಮೂಲಕ ನಿರ್ಮಿಸಲಾಗುವುದು. ಕೃಷಿ ಪಂಪ್‍ಸೆಟ್‍ಗಳಿಗೆ ನಿರಂತರ 7 ಗಂಟೆ ವಿದ್ಯುತ್ ನೀಡಲು ಇದರಿಂದ ಸಾಧ್ಯವಾಗಲಿದೆ ಎಂದು ವಿವರಿಸಿದರು. ಹಾಗೆಯೇ ಜೆಇ, ಲೈನ್‍ಮನ್ ನೇಮಕಾತಿ, ಜೆಇ ಹುದ್ದೆಗೆ ಬಡ್ತಿ ಸಮಸ್ಯೆಯನ್ನೂ ಬಗೆಹರಿಸಲಾಗುವುದು. ವರ್ಗಾವಣೆ ದಂಧೆಯನ್ನು ಯಾವುದೇ ಅಧಿಕಾರಿಗಳು ಮಾಡುವಂತಿಲ್ಲ. ವರ್ಷ ಪೂರ್ತಿ ವರ್ಗಾವಣೆ ಇರುವುದಿಲ್ಲ ಎಂದು ತಿಳಿಸಿದರು.
ಎರಡೂ ಇಲಾಖೆಗಳಲ್ಲಿ 100 ದಿನಗಳ ಕಾರ್ಯಕ್ರಮ ಯೋಜಿಸಿದ್ದೇವೆ. ಈ 100 ದಿನಗಳಲ್ಲಿ ಗ್ರಾಮಾಂತರದಲ್ಲಿ ಮನೆಗಳನ್ನು ಕಟ್ಟಿ ವಿದ್ಯುತ್ ಸಂಪರ್ಕ ಪಡೆಯಲು ಸಾಧ್ಯವಾಗದ ಮನೆಯವರಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು. ಇದನ್ನು ಮುಖ್ಯಮಂತ್ರಿಗಳ ಆಶಯದಂತೆ ‘ಬೆಳಕು’ ಯೋಜನೆಯಡಿಯಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಅತ್ಯಂತ ದುರಸ್ತಿ ಸ್ಥಿತಿಯಲ್ಲಿರುವ ಟ್ರಾನ್ಸ್‍ಫಾರ್ಮರ್ ಬದಲಾವಣೆಗೆ ಟ್ರಾನ್ಸ್‍ಫಾರ್ಮರ್ ಬ್ಯಾಂಕ್ ಸ್ಥಾಪಿಸಲಾಗುವುದು. ಕೇವಲ 24 ಗಂಟೆಗಳಲ್ಲಿ ಹಾಳಾದ ವಿದ್ಯುತ್ ಟ್ರಾನ್ಸ್‍ಫಾರ್ಮರ್ ಬದಲಾವಣೆಗೆ ಟ್ರಾನ್ಸ್‍ಫಾರ್ಮರ್ ಬ್ಯಾಂಕ್ ಸ್ಥಾಪಿಸಲಾಗುವುದು. ಕೇವಲ 24 ಗಂಟೆಗಳಲ್ಲಿ ಹಾಳಾದ ವಿದ್ಯುತ್ ಟ್ರಾನ್ಸ್‍ಫಾರ್ಮರ್ ಬದಲಾವಣೆ ಮಾಡುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಗಂಗಾ ಕಲ್ಯಾಣ ಯೋಜನೆಯಡಿ ಬೋರೈಲ್ ಕೊರೆದಿದ್ದು, ತುಂಬಾ ಕಡೆಗಳಲ್ಲಿ ವಿದ್ಯುತ್ ಸಂಪರ್ಕ ವಿಳಂಬವಾಗುತ್ತಿದೆ ಎಂಬುದು ಗಮನಕ್ಕೆ ಬಂದಿದೆ. ಬೋಬೈಲ್ ಸಿದ್ದವಾದ 30 ದಿನಗಳ ಒಳಗಾಗಿ ವಿದ್ಯುತ್ ಸಂಪರ್ಕ ನೀಡಲಾಗುವುದು. ಅನಗತ್ಯವಾಗಿ ರೈತರ ಓಡಾಟವನ್ನು ತಪ್ಪಿಸಲಾಗುವುದು ಎಂದು ತಿಳಿಸಿದರು.