Recent Posts

Monday, January 20, 2025
ಬೆಂಗಳೂರು

ವಿಧಾನಪರಿಷತ್ ಸಭಾ ನಾಯಕರಾಗಿ ಸಚಿವ ಕೋಟ ಶ್ರೀನಿವಾಸ ಪೂಜಾರಿ – ಕಹಳೆ ನ್ಯೂಸ್

ಬೆಂಗಳೂರು : ಸಮಾಜ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ವಿಧಾನಪರಿಷತ್ ಸಭಾ ನಾಯಕರಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಮನಿರ್ದೇಶನ ಬಗ್ಗೆ ಸಭಾಪತಿಗೆ ಅಧಿಕೃತ ಮಾಹಿತಿ ನೀಡಿದ್ದು, ಕೋಟ ಶ್ರೀನಿವಾಸ ಪೂಜಾರಿ ಅವರು ಸತತ 3 ಬಾರಿ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿಗೆ ಅವರು ಆಯ್ಕೆಯಾಗಿದ್ದಾರೆ. ಈ ಹಿಂದೆ ಪ್ರತಿಪಕ್ಷ ನಾಯಕರಾಗಿ ಕಾರ್ಯ ನಿರ್ವಹಿಸಿದ್ದರು. ಶ್ರೇಷ್ಠ ವಾಗ್ಮಿಯಾಗಿ ಗುರುತಿಸಿಕೊಂಡಿರುವ ಅವರು ಅತ್ಯಂತ ಸಮರ್ಥವಾಗಿ ಸದನವನ್ನು ನಿಭಾಯಿಸುವ ಸಾಮಥ್ರ್ಯ ಹೊಂದಿದವರಾಗಿದ್ದಾರೆ. ಕೋಟ ಶ್ರೀನಿವಾಸ್ ಅವರ ಮಾತುಗಾರಿಕೆ ಈ ಹಿಂದೆ ಆಡಳಿತ ಹಾಗೂ ವಿರೋಧ ಪಕ್ಷದ ಸದಸ್ಯರನ್ನು ಚಕಿತಗೊಳಿಸಿತ್ತು.

ಜಾಹೀರಾತು

ಜಾಹೀರಾತು
ಜಾಹೀರಾತು