Friday, September 20, 2024
ಕ್ರೈಮ್

ಪುತ್ತೂರು: ಅಪ್ರಾಪ್ತ ವಯಸ್ಸಿನ ಮಕ್ಕಳನ್ನು ಬಳಸಿ ಭಿಕ್ಷಾಟನೆ:; ಚೈಲ್ಡ್ ಹೆಲ್ಪ್ ಲೈನ್ ನಿಂದ ಖಾಸಗಿ ಬಸ್ ನಿಲ್ದಾಣದ ಬಳಿ ದಾಳಿ: ಮಕ್ಕಳ ರಕ್ಷಣೆ- ಕಹಳೆ ನ್ಯೂಸ್

ಪುತ್ತೂರು: ಬೇರೆಯವರ ಮಕ್ಕಳನ್ನು ತನ್ನೊಂದಿಗೆ ಇರಿಸಿಕೊಂಡು ಬಿಕ್ಷಾಟನೆ ಮಾಡಿಸುತ್ತಿದ್ದ ಘಟನೆ ಪುತ್ತೂರಿನಲ್ಲಿ ನಡೆದಿದ್ದು,

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬಗ್ಗೆ ಸಾರ್ವಜನಿಕರಿಂದ ಚಿಲ್ಡ್ ಲೈನ್ 1098 ಹೆಲ್ಪ್ ಲೈನ್ ಗೆ ಬಂದ ಮಾಹಿತಿ ಮೇರೆಗೆ ಚೈಲ್ಡ್ ಹೆಲ್ಪ್ ಲೈನ್ ಕೇಂದ್ರ ಸರ್ಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯೋಜನೆ ಅಧಿಕಾರಿಗಳು ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದ ಬಳಿ ಸೆ.13 ರಂದು ನಡೆದಿದೆ.

ಜಾಹೀರಾತು

ಅಪ್ರಾಪ್ತ ವಯಸ್ಸಿನ ಮಕ್ಕಳನ್ನು ಹಿಡಿದುಕೊಂಡು ಸುರತ್ಕಲ್ ಮೂಲದ ಮಹಿಳೆಯೊಬ್ಬರು ಪುತ್ತೂರು ತಾಲೂಕಿನ ಖಾಸಗಿ ಬಸ್ ನಿಲ್ದಾಣದ ಬಳಿ ಅಪ್ರಾಪ್ತ ವಯಸ್ಸಿನ ಮಕ್ಕಳು ಭಿಕ್ಷಟನೆಯಲ್ಲಿ ನಿರತರಾಗಿದ್ದಾರೆ ಎಂಬುದಾಗಿ ಸಾರ್ವಜನಿಕರಿಂದ ಬಂದ ಮಾಹಿತಿ ಪ್ರಕಾರ ಚೈಲ್ಡ್ ಹೆಲ್ಪ್ ಲೈನ್ ಕೇಂದ್ರ ಸಂಯೋಜಕರಾದ ದೀಕ್ಷಿತ್ ಆಚರ್ಪಡಿ ಮತ್ತು ಸದಸ್ಯರಾದ ರೇವತಿ ಹೊಸಬೆಟ್ಟು ಅಸುಂತ ಡಿಸೋಜ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯಾದ ಗಾಯತ್ರಿ ಮತ್ತು ಪುತ್ತೂರು ಮಹಿಳಾ ಪೊಲೀಸ್ ಠಾಣಾ ಸಿಬ್ಬಂದಿಗಳ ಮಕ್ಕಳಿಬ್ಬರನ್ನು ರಕ್ಷಿಸಿ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು ಪಡಿಸಿ ಮಕ್ಕಳಿಗೆ ತಾತ್ಕಾಲಿಕ ಪುನರ್ವಸತಿ ಕಲ್ಪಿಸಲಾಗಿದೆ ಎಂದು ತಿಳಿದು ಬಂದಿದೆ.

ಈ ಸಂದರ್ಭದಲ್ಲಿ ಮಕ್ಕಳ ಹಕ್ಕುಗಳ ಹೋರಾಟಗಾರರು ಲೋಕೇಶ್ ಗೌಡ ಆಲುಂಬುಡ ಕೇಶವ ಪಡೀಲ್ ಉಪಸ್ಥಿತರಿದ್ದರು.