Recent Posts

Sunday, January 19, 2025
ಸುಬ್ರಹ್ಮಣ್ಯ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಪ್ರಥಮ ಬಿ.ಎ. ವಿದ್ಯಾರ್ಥಿಗಳಿಗೆ ಪುಸ್ತಕ ಪ್ರದರ್ಶನ ಹಾಗೂ ಮಾಹಿತಿ ಕಾರ್ಯಕ್ರಮ-ಕಹಳೆ ನ್ಯೂಸ್

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಪ್ರಥಮ ಬಿ.ಎ. ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ ನೆರವೇರಿತು. ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಗೋವಿಂದ ಎನ್.ಎಸ್.ಅಧ್ಯಕ್ಷ ಸ್ಥಾನವನ್ನು ವಹಿಸಿ ಪ್ರಾಸ್ತಾವಿಕ ಮಾತುಗಳನ್ನು ನುಡಿದು ಸ್ವಾಗತಿಸಿದರು. ವಿದ್ಯಾರ್ಥಿಗಳಿಗೆ ಪಠ್ಯ ಪಠ್ಯೇತರ ಚಟುವಟಿಕೆಗಳ ಕುರಿತು ವಿವಿಧ ವಿಭಾಗದ ಉಪನ್ಯಾಸಕರುಗಳು ಮಾಹಿತಿಯನ್ನು ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮಹಾವಿದ್ಯಾಲಯದ ಐಕ್ಯೂಎಸಿ ಸಂಯೋಜಕರು ಹಾಗೂ ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸಾದ ಎನ್. ಧನ್ಯವಾದ ಸಮರ್ಪಿಸಿದರು . ನಂತರ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗಾಗಿ ಗ್ರಂಥಾಲಯ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಸುನೀತಾ ಕೆ. ಇವರ ಮಾರ್ಗದರ್ಶನದಲ್ಲಿ ಪುಸ್ತಕ ಪ್ರದರ್ಶನವನ್ನು ಏರ್ಪಡಿಸಿ ಗ್ರಂಥಾಲಯದ ಬಗ್ಗೆ ಮಾಹಿತಿ ಕಾರ್ಯಕ್ರಮವನ್ನು ನಡೆಸಲಾಯಿತು. ಸಮಾಜಶಾಸ್ತ್ರ ವಿಭಾಗದ ಉಪನ್ಯಾಸಕಿ ಶ್ರೀಮತಿ ಆರತಿ ಕೆ. ಕಾರ್ಯಕ್ರಮ ನಿರೂಪಿಸಿದರು.