Recent Posts

Monday, January 20, 2025
ಪುತ್ತೂರು

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿ0ಗ್ ಎಂಡ್ ಟೆಕ್ನಾಲಜಿಯ ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿ ಸಂಘ ಮತ್ತು ಕಾಲೇಜಿನ ಐಕ್ಯುಎಸಿ ಘಟಕ ಇದರ ಸಂಯುಕ್ತ ಆಶ್ರಯದಲ್ಲಿ ಇಂಜಿನಿಯರ್ಸ್ ಡೇ ಆಚರಣೆ – ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿ0ಗ್ ಎಂಡ್ ಟೆಕ್ನಾಲಜಿಯ ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿ ಸಂಘ ಮತ್ತು ಕಾಲೇಜಿನ ಐಕ್ಯುಎಸಿ ಘಟಕ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಇಂಜಿನಿಯರ್ಸ್ ಡೇ ಆಚರಣೆ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಮಾತಾಡಿದ ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿ0ಗ್ & ಟೆಕ್ನಾಲಜಿಯ ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ. ಡಿ. ಕಲ್ಲಾಜೆ ನಮ್ಮ ನಾಡಿನ ಹೆಮ್ಮೆಯ ಪುತ್ರ ಸರ್.ಎಂ.ವಿಶ್ವೇಶ್ವರಯ್ಯನವರು ಕಲಿಸಿಕೊಟ್ಟ ಶ್ರಮ ಮತ್ತು ಪ್ರಾಮಾಣಿಕತೆಯ ಪಾಠವನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ತನ್ಮೂಲಕ ದೇಶದ ಅಭಿವೃದ್ಧಿಯಲ್ಲಿ ತಮ್ಮ ಕೊಡುಗೆಯನ್ನು ನೀಡಬೇಕು. ಸರ್.ಎಂ.ವಿ.ಯವರ ಸಾಧನೆ ಈ ಭೂಮಿ ಇರುವವರೆಗೆ ಶಾಶ್ವತ. ಇವರ ದೂರದರ್ಶಿತ್ವವುಳ್ಳ ಯೋಚನೆಗಳು ಮತ್ತು ಯೋಜನೆಗಳು ಅವರ ಬುದ್ಧಿವಂತಿಕೆಗೆ ಸಾಕ್ಷಿಯಾಗಿವೆ ಎಂದು ಹೇಳಿದರು.


ಬಳಿಕ ಶುಭ ಹಾರೈಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ. ಮಹೇಶ್ ಪ್ರಸನ್ನ ಕೆ. ಅದಮ್ಯ ಚೇತನ, ಕ್ರಮನಿಷ್ಟವಾದ ಜೀವನ ಶೈಲಿ, ದೇಶಕ್ಕಾಗಿ ಕೆಲಸ ಮಾಡುವ ತುಡಿತ ಇವುಗಳಿಂದಾಗಿ ಸರ್.ಎಂ.ವಿಶ್ವೇಶ್ವರಯ್ಯನವರು ದೇಶದ ಇತಿಹಾಸದಲ್ಲಿ ಹೊಸ ಆಯಾಮವನ್ನೇ ಹುಟ್ಟುಹಾಕಿದರು. ಉತ್ತಮವಾದ ಕಾರ್ಯಯೋಜನೆಯನ್ನು ತಯಾರಿಸಿ ಅದನ್ನು ಸರಿಯಾಗಿ ಅನುಷ್ಠಾನಗೊಳಿಸುವವನು ಮಾತ್ರ ಶ್ರೇಷ್ಟ ಇಂಜಿನಿಯರ್ ಆಗಬಲ್ಲ ಎಂದರು. ಕಾರ್ಯಕ್ರಮದಲ್ಲಿ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ಸುಬ್ರಮಣ್ಯ ಭಟ್.ಟಿ.ಎಸ್, ಮೆಕ್ಯಾನಿಕಲ್ ಎಂಜಿನಿಯರಿ0ಗ್ ವಿಭಾಗ ಮುಖ್ಯಸ್ಥ ಡಾ. ಮನುಜೇಶ್.ಬಿ.ಜೆ ಉಪಸ್ಥಿತರಿದ್ದರು. ಕಾರ್ಯಕ್ರಮ ಸಂಯೋಜಕ ಪ್ರೊ. ಹರೀಶ್.ಎಸ್.ಆರ್ ಸ್ವಾಗತಿಸಿ ವಂದನಾರ್ಪಣೆಗೈದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು