ಸುಳ್ಯ: ಕರ್ನಾಟಕದಲ್ಲಿ ಜೆಹಾದಿ ಕೃತ್ಯಗಳನ್ನು ಪೋಷಿಸುವ ಮೂಲಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ರಾಜ್ಯವನ್ನು ಭಯೋತ್ಪಾದನಾ ಕೇಂದ್ರವನ್ನಾಗಿಸುವ ಹುನ್ನಾರ ನಡೆಸಿದೆ ಎಂದು ಉ. ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗಂಭೀರ ಆರೋಪ ಮಾಡಿದ್ದಾರೆ.
ಸುಳ್ಯ ಬಿಜೆಪಿ ಮಂಡಲ ವತಿಯಿಂದ ಮಂಗಳವಾರ ಸಂಜೆ ಚೆನ್ನಕೇಶವ ದೇವಾಲಯದ ಮುಂಭಾಗದಲ್ಲಿ ನಡೆದ ಬೃಹತ್ ಚುನಾವಣಾ ಪ್ರಚಾರ ಸಭೆ ಉದ್ದೇಶಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ 24ಕ್ಕೂ ಅಧಿಕ ಹಿಂದೂ ಕಾರ್ಯಕರ್ತರ ಹತ್ಯೆಯಾಗಿದ್ದರೂ ಜಿಹಾದಿ ಶಕ್ತಿಗಳನ್ನು ಮಟ್ಟಹಾಕಲು ಸಿದ್ದ
ರಾಮಯ್ಯ ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಉ. ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಜಿಹಾದಿ, ಮಾಫಿಯಾ, ಗೂಂಡಾಗಿರಿಗಳ ಹುಟ್ಟಡಗಿಸಲಾಗಿದೆ. 24 ತಾಸುಗಳಲ್ಲಿ ಅಕ್ರಮ ಕಸಾಯಿಖಾನೆ ಮುಚ್ಚಿದ್ದೇವೆ. ಆದರೆ ಐದು ವರ್ಷ ಕರ್ನಾಟಕವನ್ನು ಆಳಿದ ಸಿದ್ದರಾಮಯ್ಯಗೆ ಇದು ಏಕೆ ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿದ ಅವರು, ಇಲ್ಲಿ ಅಕ್ರಮ ಕಸಾಯಿಖಾನೆಗಳಿಗೆ ರಾಜ್ಯ ಸರಕಾರವೇ ಬೆಂಬಲ ನೀಡುತ್ತಿದೆ ಎಂದು ಆರೋಪಿಸಿದರು.
ದ. ಕ. ಜಿಲ್ಲಾ ಚುನಾವಣಾ ಪ್ರಭಾರಿ ಕೆ. ಸುರೇಂದ್ರನ್, ಶಾಸಕ ಎಸ್. ಅಂಗಾರ ಮಾತನಾಡಿದರು.
ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ಪ್ರತಾಪಸಿಂಹ ನಾಯಕ್ ಮಾತನಾಡಿ ದರು. ವೇದಿಕೆಯಲ್ಲಿ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ ವಳಲಂಬೆ, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಹೆಗ್ಡೆ, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ನ.ಪಂ.ಅಧ್ಯಕ್ಷೆ ಶೀಲಾವತಿ ಮಾಧವ, ಶೈಲಜಾ ಭಟ್, ಎಪಿಎಂಸಿ ಅಧ್ಯಕ್ಷ ದೇರಣ್ಣ ಗೌಡ, ಎಸ್.ಎನ್. ಮನ್ಮಥ ಉಪಸ್ಥಿತರಿದ್ದರು.