Sunday, November 24, 2024
ಪುತ್ತೂರು

ಅಂಬಿಕಾ ಸಿಬಿಎಸ್‍ಇ ವಿದ್ಯಾಲಯದಲ್ಲಿ ಶಾಲಾ ಪ್ರಾರಂಭೋತ್ಸವ-ಕಹಳೆ ನ್ಯೂಸ್

ಪುತ್ತೂರು: ನಟ್ಟೋಜ ಫೌಂಡೇಶನ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಸಿಬಿಎಸ್‍ಇವಿದ್ಯಾಲಯದಲ್ಲಿ ಶುಕ್ರವಾರ ಶಾಲಾ ಪ್ರಾರಂಭೋತ್ಸವದ ನೆಲೆಯಲ್ಲಿ ಆಯೋಜಿಸಲಾದ ಧಾರ್ಮಿಕ ಹಾಗೂ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ, ಬಪ್ಪಳಿಗೆಯಲ್ಲಿನ ಅಂಬಿಕಾ ಸಿಬಿಎಸ್‍ಇ ವಿದ್ಯಾಲಯದ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಮಹೇಶ್ ಕಜೆ ಅವರು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಶಾಲೆಯ ಪರಿಸರ ಅತ್ಯಂತ ಹೆಚ್ಚು ಕೊಡುಗೆಗಳನ್ನು ನೀಡುತ್ತದೆ. ಆದರೆ ಕೊರೋನಾ ನಿಮಿತ್ತ ಕಳೆದ ಒಂದು ವರ್ಷದಿಂದ ಈಚೆಗೆ ಮಕ್ಕಳಿಗೆ ಶಾಲೆಗೆ ಬರುವಂತಹ ಅವಕಾಶ ತಪ್ಪಿ ಹೋಗಿತ್ತು. ಆದರೆ ಇದೀಗ ಮರಳಿ ಶಾಲೆಗೆ ಅಡಿಯಿಡುವ ವಾತಾವರಣ ನಿರ್ಮಾಣವಾಗಿರುವುದು ಅತ್ಯಂತ ಸ್ವಾಗತಾರ್ಹ. ಮಕ್ಕಳು ಶಾಲಾ ವಾತಾವರಣದಲ್ಲಿನ ಕಲಿಕೆಯ ಪ್ರಯೋಜನವನ್ನು ಸಂಪೂರ್ಣವಾಗಿ ಪಡೆದುಕೊಳ್ಳಬೇಕು ಎಂದು ಹೇಳಿದರು.

ಸಂಸ್ಥೆಯಲ್ಲಿ ಗಣಹೋಮವನ್ನು ನೆರವೇರಿಸಿಕೊಟ್ಟ ವೇ.ಮೂ.ಶ್ರೀಕೃಷ್ಣ ಉಪಾಧ್ಯಾಯ ಮಾತನಾಡಿ ವಿದ್ಯಾರ್ಥಿಗಳು ಏಕಾಗ್ರತೆ ಹೆಚ್ಚಿಸಿಕೊಂಡು, ಕಲಿಕೆಯಲ್ಲಿ ಸಾಧನೆ ಮಾಡುವುದರ ಜತೆಗೆ ಗುರುಹಿರಿಯಯರಲ್ಲಿ ಗೌರವವನ್ನು ಬೆಳೆಸಿಕೊಳ್ಳಬೇಕು. ಶುದ್ಧ ಮನಸ್ಸಿನಿಂದ ಓದಿದಾಗ ವಿಷಯಗಳು ಬೇಗನೇ ಮನದಟ್ಟಾಗುತ್ತಾ ಸಾಗುತ್ತವೆ ಎಂದು ನುಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ ಮಕ್ಕಳು ದೇಶದ ನಿಜವಾದ ಆಸ್ತಿ. ಹಾಗಾಗಿ ಸಕಾಲದಲ್ಲಿ ಯೋಗ್ಯ ಶಿಕ್ಷಣ ನೀಡುವ ಜವಾಬ್ದಾರಿ ಶಾಲೆಗಳಿಗಿವೆ. ಮಕ್ಕಳು ಭವಿಷ್ಯದ ಭಾರತದ ಅಮೂಲ್ಯ ರತ್ನಗಳಾಗಿ ಬೆಳೆಯಬೇಕು. ಆಗ ಹೆತ್ತವರಿಗೂ ಶಿಕ್ಷಣ ಸಂಸ್ಥೆಗಳಿಗೂ ಅಪಾರವಾದ ಹೆಮ್ಮೆ ಹಾಗೂ ಸಾರ್ಥಕ ಭಾವನೆ ಮೂಡುವುದಕ್ಕೆ ಸಾಧ್ಯ ಎಂದು ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ, ಸದಸ್ಯ ಪ್ರಸನ್ನ ಭಟ್, ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ, ಪ್ರಾಂಶುಪಾಲೆ ಮಾಲತಿ ಡಿ, ಉಪಪ್ರಾಂಶುಪಾಲೆ ಸುಜನಿ ಬೋರ್ಕರ್, ಬೋಧಕ ಮತ್ತು ಬೋಧಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ಹೂ ನೀಡಿ, ಆರತಿ ಬೆಳಗುವುದರ ಮೂಲಕ ಸಾಂಪ್ರದಾಯಿಕವಾಗಿ ಸ್ವಾಗತಿಸಲಾಯಿತು. ಹೊಸದಾಗಿ ಶಾಲೆಗೆ ಸೇರಿರುವ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪರಸ್ಪರ ಪರಿಚಯ ಮಾಡಿಕೊಂಡರು. ಶಿಕ್ಷಕ ಸತೀಶ್ ಇರ್ದೆ ಕಾರ್ಯಕ್ರಮ ನಿರ್ವಹಿಸಿದರು.