ಸಿಎ ಪರೀಕ್ಷೆಯಲ್ಲಿ ದೇಶಕ್ಕೆ ಮೊದಲ ಸ್ಥಾನ ಪಡೆದ ರುತ್ ಕ್ಲಾರಾ ಡಿಸಿಲ್ವಾರನ್ನು ಅಭಿನಂದಿಸಿದ ಶಾಸಕ ವೇದವ್ಯಾಸ್ ಕಾಮತ್- ಕಹಳೆ ನ್ಯೂಸ್
ಮಂಗಳೂರು: ಸಿಎ ಪರೀಕ್ಷೆಯಲ್ಲಿ ದೇಶಕ್ಕೆ ಮೊದಲ ಸ್ಥಾನ ಪಡೆದ ರುತ್ ಕ್ಲಾರಾ ಡಿಸಿಲ್ವಾ ಅವರನ್ನು ಮಂಗಳೂರು ದಕ್ಷಿಣ ಶಾಸಕರಾದ ವೇದವ್ಯಾಸ್ ಕಾಮತ್ ಅವರು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣದ ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿ ರೂಪಾ.ಡಿ ಬಂಗೇರ, ಸುರೇಂದ್ರ ಜಪ್ಪಿನಮೊಗರು, ಸ್ಥಳೀಯ ಮನಪಾ ಸದಸ್ಯರಾದ ಕದ್ರಿ ಮನೋಹರ್ ಶೆಟ್ಟಿ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ರಮೇಶ್ ಕಂಡೆಟ್ಟು, ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.