Tuesday, January 21, 2025
ರಾಜಕೀಯರಾಜ್ಯಸುದ್ದಿ

” ನನ್ನದು …….. Strong ಇದೆ ” ತಮ್ಮ ಕುರಿತು ಹರಿದಾಡುತ್ತಿರುವ ವಿಡಿಯೋ ಗೆ ಸಂಸದ ಸದಾನಂದ ಗೌಡ ಸ್ಪಷ್ಟನೆ ; ಶೇರ್ ಮಾಡಿದವರಿಗೆ ಶಿಕ್ಷೆಯ ಎಚ್ಚರಿಕೆ – ಕಹಳೆ ನ್ಯೂಸ್

ಕೇಂದ್ರ ಸಚಿವ ಸದಾನಂದ ಗೌಡ ತಮ್ಮ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದ ವಿಡಿಯೊವೊಂದರ ಕುರಿತು ಸ್ಪಷ್ಟನೆ ನೀಡಿ ಟ್ವೀಟ್ ಮಾಡಿದ್ದಾರೆ. ವಿಡಿಯೊದಲ್ಲಿ ಇರುವುದು ತಾವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

‘ನನ್ನನ್ನು ಹೋಲುವಂತೆ ಮಾರ್ಫ್​ ಮಾಡಿದ ಅಥವಾ ತಿರುಚಿದ ವಿಡಿಯೊ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆ ವಿಡಿಯೊದಲ್ಲಿ ಇರುವುದು ನಾನಲ್ಲ. ನನ್ನ ವಿರೋಧಿಗಳು ನಿಷ್ಪಕ್ಷಪಾತ ವ್ಯಕ್ತಿತ್ವವನ್ನು ಹಾಳುಮಾಡಲು ಈ ವಿಡಿಯೊ ನಿರ್ಮಿಸಿದ್ದಾರೆ ಎಂದು ಹಿರಿಯ ಬಿಜೆಪಿ ಮುಖಂಡ, ಕೇಂದ್ರ ಸಚಿವ ಸದಾನಂದ ಗೌಡ ಸ್ಪಷ್ಟನೆ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನಾನು ಈಗಾಗಲೇ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದೇನೆ. ನನಗೆ ನಂಬಿಕೆ ಇದೆ, ಅಪರಾಧಿಗಳನ್ನು ಶೀಘ್ರವೇ ಬಂಧಿಸಲಾಗುವುದು. ಅಲ್ಲದೆ, ನಾನು ನ್ಯಾಯಾಲಯದ ತಡೆಯಾಜ್ಞೆಯ ಪ್ರಕಾರ, ವಿಷಯವನ್ನು ಫಾರ್ವರ್ಡ್ ಮಾಡುವ/ಅಪ್‌ಲೋಡ್ ಮಾಡುವ ಯಾರಾದರೂ ಕಾನೂನಿನ ಸಂಬಂಧಿತ ವಿಭಾಗಗಳ ಪ್ರಕಾರ ಶಿಕ್ಷೆಗೆ ಗುರಿಯಾಗುತ್ತಾರೆ’ ಎಂದು ಅವರು ಬರೆದುಕೊಂಡಿದ್ದಾರೆ. ಅಷ್ಟೇ ಅಲ್ಲದೇ, ಇಂತಹ ಕೃತ್ಯ ಎಸಗುವ ಯಾರಾದರೂ ತಿಳಿದಿದ್ದಲ್ಲಿ ತಿಳಿಸುವಂತೆಯೂ ಅವರು ಮನವಿ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು