Recent Posts

Monday, January 20, 2025
ಬಂಟ್ವಾಳ

ಸಜೀಪ ಮೂಡದಲ್ಲಿ ಅಸೌಖ್ಯದಿಂದ ಬಳಲುತ್ತಿದ್ದ ವ್ಯಕ್ತಿ ಸಾವು – ಕಹಳೆ ನ್ಯೂಸ್

ಬಂಟ್ವಾಳ: ಅಸೌಖ್ಯದಿಂದ ಬಳಲುತ್ತಿದ್ದ ವ್ಯಕ್ತಿ ಸಾವನ್ನಪ್ಪಿದ್ದು, ಇದು ಸಂಶಯಾಸ್ಪದ ಸಾವು ಎಂದು ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸಜೀಪ ಮೂಡ ಗ್ರಾಮದ ಬೇಂಕ್ಯ ನಿವಾಸಿ ಅವಿವಾಹಿತ ಹರೀಶ್ ಪೂಜಾರಿ (೪೨) ಮೃತಪಟ್ಟ ವ್ಯಕ್ತಿ ಎನ್ನಲಾಗಿದೆ.

ಕಳೆದ ಮೂರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹರೀಶ್ ಪೂಜಾರಿ ಅವರು ಮನೆಯಲ್ಲಿ ಮಲಗಿದ್ದರು. ಆದರೆ ಇವರ ಅರೋಗ್ಯ ತೀರಾ ಹದಗೆಟ್ಟ ಕಾರಣ ಮನೆಯವರು ಆಸ್ಪತ್ರೆಗೆ ಸಾಗಿಸಿದರಾದರೂ ಆದಾಗಲೇ ಆತ ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ಹರೀಶ್ ಪೂಜಾರಿ ಸಾವಿನ ಬಗ್ಗೆ ಮನೆಯವರಿಗೆ ಸಂಶಯ ವ್ಯಕ್ತವಾಗಿದ್ದು, ಸೂಕ್ತವಾದ ತನಿಖೆ ನಡೆಸಿ ನ್ಯಾಯ ಒದಗಿಸಿಕೊಡುವಂತೆ ಮೃತನ ತಮ್ಮ ಪ್ರಕಾಶ್ ಪೂಜಾರಿ ನಗರ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಹರೀಶ್ ಪೂಜಾರಿ ಅವರ ಮೃತದೇಹ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿದ್ದು, ಆಸ್ಪತ್ರೆಗೆ ಬಂಟ್ವಾಳ ನಗರ ಠಾಣಾ ಎಸ್. ಐ.ಅವಿನಾಶ್ ಬೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಪ್ರಾರಂಭಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು


ಮರಣೋತ್ತರ ಪರೀಕ್ಷೆ ಬಳಿಕ ಸಾವಿನ ಬಗ್ಗೆ ಸ್ಪಷ್ಟ ವಾದ ಮಾಹಿತಿ ಲಭ್ಯವಾಗಲಿದೆ. ಒಂದು ವೇಳೆ ಹರೀಶ್ ಪೂಜಾರಿ ಎಂಬಾತನ ಕೊಲೆಯಾಗಿದ್ದರೆ ಯಾವ ಕಾರಣಕ್ಕಾಗಿ ಕೊಲೆ ನಡೆಸಲಾಗಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಎಲ್ಲವೂ ಪೋಲೀಸ್ ತನಿಖೆಯ ಬಳಿಕವೇ ಹೊರಬರಲಿದೆ.