Recent Posts

Monday, January 20, 2025
ಬೆಂಗಳೂರು

ರಾಜ್ಯಾದ್ಯಂತ ಮೂರು ಹಂತದಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆ : ಇಂಧನ ಸಚಿವ ಸುನೀಲ್ ಕುಮಾರ್- ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಮೂರು ಹಂತದಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆ ಮಾಡಲಾಗುವುದು ಎಂದು ಇಂಧನ ಸಚಿವ ಸುನೀಲ್ ಕುಮಾರ್ ಸದನದಲ್ಲಿ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ನಡೆದ ಪ್ರಶ್ನೋತ್ತರ ಕಲಾಪದ ವೇಳೆ ಕಾಂಗ್ರೆಸ್ ಸದಸ್ಯ ಪ್ರತಾಪ್ ಚಂದ್ರ ಶೆಟ್ಟಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಇಂಧನ ಸಚಿವ ಸುನೀಲ್ ಕುಮಾರ್, ರಾಜ್ಯದಲ್ಲಿ ಮೂರು ಹಂತದಲ್ಲಿ ಸ್ಮಾರ್ಟ್ ಹಾಗೂ ಪ್ರೀ ಪೇಡ್ ವಿದ್ಯುತ್ ಮೀಟರ್ ಅಳವಡಿಕೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಮೊದಲ ಹಂತದಲ್ಲಿ ಸರ್ಕಾರಿ ಕಚೇರಿಗಳಿಗೆ, ಎರಡನೇ ಹಂತದಲ್ಲಿ ಹೊಸ ಕಟ್ಟಡ ನಿರ್ಮಾಣದ ವೇಳೆಯಲ್ಲಿ ಸಂಪರ್ಕ ಪಡೆದುಕೊಳ್ಳುವವರಿಗೆ, ಮೂರನೆಯದಾಗಿ 27ಅಮೃತ ಸಿಟಿಗಳಿಗೆ ಈ ಯೋಜನೆಯನ್ನು ಅಳವಡಿಕೆ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಇದೇ ವೇಳೆ ಅವರು ತಮ್ಮ ಮಾತನ್ನು ಮುಂದುವರೆಸಿ, ಯಾವುದೇ ಕಾರಣಕ್ಕೂ ಸ್ಮಾರ್ಟ್ ಮೀಟರ್, ಪ್ರೀಪೇಡ್ ಮೀಟರ್ ಗಳನ್ನು, ಕೃಷಿ ಪಂಪ್ ಸೆಟ್ ಗಳಿಗೆ ಅಳವಡಿಕೆ ಮಾಡಲಾಗುವುದಿಲ್ಲ ಅಂತ ಅಶ್ವಾಸನೆ ನೀಡಿದರು. ಟ್ರಾನ್ಸ್ ಫಾರ್ಮರ್ ಸುಟ್ಟು ಹೋದಲ್ಲಿ 24 ಗಂಟೆಯಲ್ಲಿ ಬದಲಾಯಿಸಿ ಕೊಡಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಾಗುವುದು ಅಂತ ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು