ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ ಹಾಗೂ ಕೊರೋನಾ ಬಗ್ಗೆ ಜಾಗೃತಿ ಕಾರ್ಯಕ್ರಮ- ಕಹಳೆ ನ್ಯೂಸ್
ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀüನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ ಹಾಗೂ ಕೊರೋನಾ ಬಗ್ಗೆ ಜಾಗೃತಿ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮವನ್ನು ಆರ್ಯಾಪು ಗ್ರಾಮ ಪಂಚಾಯತ್‍ನ ಅಧ್ಯಕ್ಷರಾದ ಶ್ರೀಮತಿ ಸರಸ್ವತಿ, ದೀಪ ಪ್ರಜ್ವಲಿಸಿ, ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಕಾರ್ಯಕ್ರಮದ ಅತಿಥಿಯಾದ ಗ್ರಾಮ ಪಂಚಾಯತ್ ಆರ್ಯಾಪು ಇದರ ಅಭಿವೃದ್ಧಿ ಅಧಿಕಾರಿ, ಶ್ರೀ ನಾಗೇಶ್ ಮಾರ್ತಾಜೆ ಮಾತನಾಡಿ, ಯಾವುದೇ ಯಶಸ್ಸಿಗೆ ಸತತ ಕಠಿಣ ಪ್ರಯತ್ನಬೇಕು, ಆ ಪ್ರಯತ್ನ ಇಂದಿನಿಂದಲೇ ಆರಂಭವಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತನ್ನಾಡಿದರು. ಕೋವಿಡ್-19 ಉಪನ್ಯಾಸವಿತ್ತ ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಭವ್ಯಶ್ರೀ ಕೋರೋನಾ ಮುಂಜಾಗರೂಕತಾ ಕ್ರಮಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿ, ಈ ರೋಗದ ವಿರುದ್ಧ ದೈನಂದಿನ ಜೀವನದೊಂದಿಗೆ ಯಾವ ರೀತಿಯಾಗಿ ತೊಡಗಿಸಿಕೊಳ್ಳಬೇಕೆಂದು ಈ ಸಂದರ್ಭದಲ್ಲಿ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ, ಅಕ್ಷಯ ಕಾಲೇಜಿನ ಅಧ್ಯಕ್ಷರಾದ ಜಯಂತ್ ನಡುಬೈಲುರವರು ನೂತನ ಕ್ಯಾಂಪಸ್‍ಗೆ ಆಗಮಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಸ್ವಾಗತಿಸಿ, ಆರ್ಯಾಪು ಗ್ರಾಮ ಪಂಚಾಯತ್‍ನ್ನು 2021-22ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನಾ ಚಟುವಟಿಕೆಗಳಿಗಾಗಿ ದತ್ತು ಪಡೆಯಲು ಮನವಿ ಮಾಡಿದರು. ಈ ಸಂದರ್ಭದಲ್ಲಿ ಅಂತರಾಷ್ಟ್ರೀಯ ಯೋಗಪಟು ಕು. ಪ್ರಣಮ್ಯ ಸಿ.ಎ, ನಾಯಕರಾದ ಗಗನ್‍ದೀಪ್ ಎ. ಬಿ, ಹಾಗೂ ಅಂತರಾಷ್ಟೀಯ ಯೋಗಪಟು ಪ್ರತೀಕ್ಷಾ ರೈಯವರನ್ನು ಅಭಿನಂದಿಸಲಾಯಿತು. ಸಮಾರಂಭದಲ್ಲಿ ಪ್ರಾಂಶುಪಾಲರಾದ ಸಂಪತ್ ಪಕ್ಕಳ, ಆಡಳಿತಾಧಿಕಾರಿ ಅರ್ಪಿತ್ ಟಿ.ಎ ಉಪಸ್ಥಿತರಿದರು. ಶ್ರೀಮತಿ ಪ್ರಿಯಾ, ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕು.ಪ್ರಣಮ್ಯ ಸಿ.ಎ ಸ್ವಾಗತಿಸಿ, ಗಗನ್‍ದೀಪ್ ವಂದಿಸಿದರು. ಕು. ರಶ್ಮಿ ಕಾರ್ಯಕ್ರಮವನ್ನು ನಿರೂಪಿಸಿದರು.