Sunday, January 19, 2025
ಸುದ್ದಿ

ಟೈಲರಿಂಗ್ ನೌಕರರಿಗೆ ಭವಿಷ್ಯ ಪಿಂಚಣಿ ನಿಧಿ ಪಿಂಚಣಿ ಜಾರಿಗೊಳಿಸುವ ಕುರಿತು ರಾಜ್ಯ ಕಾರ್ಮಿಕ ಸಚಿವರಾದ ಶಿವರಾಮ್ ಹೆಬ್ಬಾರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ ಶಾಸಕ ವೇದವ್ಯಾಸ್ ಕಾಮತ್ – ಕಹಳೆ ನ್ಯೂಸ್

ಮಂಗಳೂರು : ಕರ್ನಾಟಕ ಟೈಲರಿಂಗ್ ಅಸೋಸಿಯೇಷನ್ ನಿಯೋಗವು ಮಂಗಳೂರು ನಗರ ದಕ್ಷಿಣ ಶಾಸಕರಾದ ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ರಾಜ್ಯ ಕಾರ್ಮಿಕ ಸಚಿವರಾದ ಶಿವರಾಮ್ ಹೆಬ್ಬಾರ್ ಅವರನ್ನು ಭೇಟಿ ಮಾಡಿ ಬಟ್ಟೆ ಹೊಲಿದು ಜೀವನ ಸಾಗಿಸುತ್ತಿರುವ ಟೈಲರಿಂಗ್ ನೌಕರರಿಗೆ ಭವಿಷ್ಯ ಪಿಂಚಣಿ ನಿಧಿ ಜಾರಿಗೊಳಿಸುವ ಕುರಿತು ಚರ್ಚೆ ನಡೆಸಿ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಹಾಗೂ ಇತರೆ ಬೇಡಿಕೆಗಳ ಕುರಿತು ಸಂಸ್ಥೆಯ ಪದಾಧಿಕಾರಿಗಳು ಹಾಗೂ ಸಚಿವರೊಂದಿಗೆ ಸಭೆ ನಡೆಯಿತು. ಈ ಸಂದರ್ಭದಲ್ಲಿ ಕರ್ನಾಟಕ ಸ್ಟೇಟ್ ಟೈಲರಿಂಗ್ ಎಸೋಸಿಯೇಷನ್ ರಾಜ್ಯಾಧ್ಯಕ್ಷ ಕೆ. ಎಸ್ ಆನಂದ, ರಾಜ್ಯ ಪ್ರಧಾನ ಕಾರ್ಯದರ್ಶಿ ವಸಂತ ಬಿ, ರಾಜ್ಯ ಉಪಾಧ್ಯಕ್ಷ ಸುರೇಶ್ ಸಾಲ್ಯಾನ್, ಜಿಲ್ಲಾ ಅಧ್ಯಕ್ಷರಾದ ಪ್ರಜ್ವಲ್ ಕುಮಾರ್ ಉಪಸ್ಥಿತರಿದ್ದರು.

ಜಾಹೀರಾತು

ಜಾಹೀರಾತು
ಜಾಹೀರಾತು